ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸಮರ್ಪಕ ನೀರು ಪೂರೈಕೆಗೆ ತಾಕೀತು

Last Updated 11 ಅಕ್ಟೋಬರ್ 2021, 15:03 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕು’ ಎಂದು ಸಂಸದೆ ಮಂಗಲಾ ಅಂಗಡಿ ಮತ್ತು ಶಾಸಕ ಅನಿಲ ಬೆನಕೆ ಸೂಚಿಸಿದರು.

ಇಲ್ಲಿನ ನಗರಪಾಲಿಕೆ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳು ಹಾಗೂ ಎಲ್‌ ಅಂಡ್ ಟಿ ಕಂಪನಿಯ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ನಗರದಲ್ಲಿ ನೀರು ಪೂರೈಕೆ ಹೊಣೆಯನ್ನು ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಎಲ್ ಅಂಡ್ ಟಿ ಕಂಪನಿಗೆ ವಹಿಸಿದ ನಂತರ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ನೀರು ಪೂರೈಕೆಯಲ್ಲಿ ಪದೇ ಪದೇ ವ್ಯತ್ಯಯ ಉಂಟಾಗುತ್ತಿದೆ. ಇದರಿಂದ ಜನರಿಗೆ ತೀವ್ರ ತೊಂದರೆ ಆಗುತ್ತಿದೆ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು’ ಎಂದು ತಾಕೀತು ಮಾಡಿದರು.

‘ವಿದ್ಯುತ್‌ ವ್ಯತ್ಯಯ, ಸಿಬ್ಬಂದಿ ಕೊರತೆ, ಪಂಪಿಂಗ್‌ ಸಮಸ್ಯೆ ಮೊದಲಾದ ನೆಪಗಳನ್ನು ಹೇಳುವಂತಿಲ್ಲ. ಜಲಾಶಯಗಳಲ್ಲಿ ನೀರು ಲಭ್ಯವಿದ್ದರೂ ಪೂರೈಕೆಗೆ ಕ್ರಮ ವಹಿಸದಿದ್ದರೆ ಯಾರು ಹೊಣೆ? ಜನರು ಜನಪ್ರತಿನಿಧಿಗಳಾದ ನಮ್ಮನ್ನು ಪ್ರಶ್ನಿಸುತ್ತಾರೆ. ಹೆಸ್ಕಾಂ, ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮತ್ತು ಎಲ್ ಅಂಡ್ ಟಿ ಕಂಪನಿಯವರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜನರಿಗೆ ನೀರು ಒದಗಿಸುವುದು ನಿಮ್ಮೆಲ್ಲರ ಆದ್ಯತೆಯಾಗಬೇಕು. ಮುಂದೆ ಲೋಪದೋಷಗಳು ಕಂಡುಬಂದಲ್ಲಿ ಶಿಸ್ತುಕ್ರಮಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಮಹಾನಗರಪಾಲಿಕೆ ಆಯುಕ್ತ ರುದ್ರೇಶ ಘಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT