ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರೇಶ ಅಂಗಡಿಗೆ ‘ಸ್ವರ ಶ್ರದ್ಧಾಂಜಲಿ’

Last Updated 17 ನವೆಂಬರ್ 2020, 16:01 IST
ಅಕ್ಷರ ಗಾತ್ರ

ಬೆಳಗಾವಿ: ಈಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ‘ಸ್ವರ ಶ್ರದ್ಧಾಂಜಲಿ’ ಕಾರ್ಯಕ್ರಮವನ್ನು ಇಲ್ಲಿನ ರಾಮತೀರ್ಥನಗರದ ಶಿವಾಲಯದ ಆವರಣದಲ್ಲಿ ಮಂಗಳವಾರ ರಾತ್ರಿ ಆಯೋಜಿಸಲಾಗಿತ್ತು.

ಸುರೇಶ ಅಂಗಡಿ ಅಭಿಮಾನಿಗಳ ಬಳಗದ ಅಧ್ಯಕ್ಷ ಸುರೇಶ ಯಾದವ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಅಂಗಡಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ‘ಅಂಗಡಿ ಅವರು ಕಾಯಕವೇ ಕೈಲಾಸ ಎಂಬ ಜಗಜ್ಯೋತಿ ಬಸವೇಶ್ವರರ ವಾಣಿಯನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದರು. ರಾಜ್ಯದ ಅನೇಕರು ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಹೋಗಿದ್ದಾರೆ. ಆದರೆ, ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗಳನ್ನು ಸುರೇಶ ಅಂಗಡಿ ಅವರು ಒಂದು ವರ್ಷದಲ್ಲಿ ಪುನರಾರಂಭಿಸಿದ್ದರು. ಬೆಳಗಾವಿಯಿಂದ ಬೆಂಗಳೂರಿಗೆ ಹೊಸ ರೈಲು ಆರಂಭಿಸಿ ಮತ್ತಷ್ಟು ಜನಪ್ರಿಯರಾಗಿದ್ದರು. ಅವರ ಅಕಾಲಿಕ ನಿಧನದ ನೋವು ನಮ್ಮನ್ನು ಕಾಡುತ್ತಿದೆ. ಅವರು ಕಂಡಿದ್ದ ಎಲ್ಲಾ ಕನಸುಗಳನ್ನು ನನಸು ಮಾಡಲು ಪ್ರಯತ್ನಿಸುತ್ತೇವೆ’ ಎಂದು ಹೇಳಿದರು.

ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಜೂನಿಯರ್‌ ಶಿವರಾಜ್‍ಕುಮಾರ್ ಖ್ಯಾತಿಯ ಇಸ್ಮಾಯಿಲ್ ಹಾಡಿದರು. ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಮುಖಂಡರಾದ ಎಸ್.ಎಸ್. ಕಿವಡಸನ್ನವರ, ಎನ್.ವಿ. ನಿರ್ವಾಣಿ, ಸುರೇಶ ಅಂಗಡಿ ಪುತ್ರಿ ಸ್ಫೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT