ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪರಿಸ್ಥಿತಿ ಗಂಭೀರ, ಎಚ್ಚರ ಅಗತ್ಯ ಎಂದ ಸಚಿವ ಸುರೇಶ ಅಂಗಡಿ

Last Updated 12 ಏಪ್ರಿಲ್ 2020, 12:58 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ 14 ಮಂದಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ. ಹೀಗಾಗಿ, ಪರಿಸ್ಥಿತಿ ಗಂಭೀರವಾಗಿರುವುದರಿಂದ ಜನರು ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದೆಹಲಿಯ ನಿಜಾಮುದ್ದೀನ್‌ ಧಾರ್ಮಿಕ ಸಭೆಗೆ ಹೋಗಿ ವಾಪಾಸ್ ಬಂದವರು ತಪಾಸಣೆಗೆ ಒಳಗಾಗದಿರುವುದೆ ಸೋಂಕು ಪೀಡಿತರ ಸಂಖ್ಯೆ ಏರಿಕೆಗೆ ಕಾರಣವಾಗಿದೆ ಎನ್ನಬಹುದಾಗಿದೆ. ಈ ವಿಷಯದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ತನ್ನ ಕ್ರಮ ಜರುಗಿಸಲಿದೆ. ಸದ್ಯಕ್ಕೆ ಈ ನಿಟ್ಟಿನಲ್ಲಿ ಹೆಚ್ಚಿನ ಚರ್ಚೆ ಮಾಡುವುದಿಲ್ಲ’ ಎಂದರು.

‘ಜಿಲ್ಲಾಡಳಿತ ಮತ್ತಷ್ಟು ಎಚ್ಚರಿಕೆ ನೀಡುವುದು ಅವಶ್ಯವಾಗಿದೆ. ಸಾರ್ವಜನಿಕರು ಸಹ ಅಧಿಕಾರಿಗಳು ಹಾಗೂ ಪೊಲೀಸರಿಗೆ ಸಹಕರಿಸಬೇಕು. ಅನಗತ್ಯವಾಗಿ ಹೊರಗೆ ತಿರುಗಾಡಬಾರದು. ಮನೆಯಲ್ಲಿ ಇರಬೇಕು. ಲಾಕ್‌ಡೌನ್ ನಿಯಮಗಳನ್ನು ಪಾಲಿಸಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT