ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುವರ್ಣ ವಿಧಾನಸೌಧ: ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ

Last Updated 13 ಡಿಸೆಂಬರ್ 2021, 6:12 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಬೆಳಿಗ್ಗೆಯಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಬಂದಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದರು.

ವಿಧಾನಮಂಡಲ ಅಧಿವೇಶನದ ಅವಧಿಯಲ್ಲಿ ಅಹಿತಕರ ಬೆಳವಣಿಗೆಗಳು ನಡೆಯದಂತೆ ನಿಯಂತ್ರಿಸಬೇಕು ಮತ್ತು ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿ, ಉತ್ತರ ವಲಯ ಐಜಿಪಿ ಸತೀಶ್ ಕುಮಾರ್, ಬೆಳಗಾವಿ ಪೊಲೀಸ್ ಕಮಿಷನರ್ ಕೆ.ತ್ಯಾಗರಾಜನ್ ಮತ್ತು ಎಸ್ಪಿ ಲಕ್ಷ್ಮಣ ನಿಂಬರಗಿ ಸಭೆಯಲ್ಲಿದ್ದರು.

ಸುವರ್ಣ ವಿಧಾನಸೌಧ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ಸಚಿವರು ಮಾಹಿತಿ ಪಡೆದರು. ಪ್ರತಿಭಟನೆಗಳಿಗೆ ಸಂಬಂಧಿಸಿದಂತೆಯೂ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT