ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಪ್ರವೇಶ ದ್ವಾರದಲ್ಲಿ ತಡೆದರು. ಅದನ್ನು ಖಂಡಿಸಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬ್ಯಾರಿಕೇಡ್ ಮುರಿದು ನುಗ್ಗಲು ಕಾಂಗ್ರೆಸ್ ಕಾರ್ಯಕರ್ತರ ಯತ್ನಿಸಿದರು. ಕಾಂಗ್ರೆಸ್ ಮುಖಂಡರು ಟ್ರ್ಯಾಕ್ಟರ್‌ನಲ್ಲಿ ಹೋಗಲು ಸರ್ಕಾರ ಕೊನೆಗೂ ಅವಕಾಶ ನೀಡಿದೆ.
'ನಾವು ಅಧಿವೇಶನಕ್ಕೆ ಹಾಜರಾಗುವುದಕ್ಕೆ ತೊಂದರೆ ಪಡಿಸುತ್ತಿದ್ದಾರೆ' ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿದರು.
'ನಾವು ಟ್ರ್ಯಾಕ್ಟರ್‌ನಲ್ಲಿ ಹೋಗುತ್ತೀವೋ ಬೇರೆ ವಾಹನದಲ್ಲಿ ಹೋಗುತ್ತೇವೋ ಇವರಾರು ಕೇಳುವುದಕ್ಕೆ? ತಡೆಯುವುದಕ್ಕೆ? ವಿಧಾನಮಂಡಲ ಪ್ರವೇಶಿಸಲು ಜನರು ನಮಗೆ ಪಾಸ್ ಕೊಟ್ಟಿದ್ದಾರೆ' ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
'ವಿರೋಧ ಪಕ್ಷದವರನ್ನು ಹೊರಗಿಟ್ಟು ವಿಧೇಯಕಗಳನ್ನು ಪಾಸ್ ಮಾಡಿಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ. ಹೀಗಾಗಿ ನಮ್ಮನ್ನು ಹೊರಗೇ ತಡೆದಿದ್ದಾರೆ. ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಟ್ಟುಕೊಳ್ಳಲು ವ್ಯವಸ್ಥಿತವಾದ ಹುನ್ನಾರ ನಡೆಸುತ್ತಿದ್ದಾರೆ. ವಿರೋಧ ಪಕ್ಷದವರು ಬಂದರೆ ಸರ್ಕಾರದ ಭ್ರಷ್ಟಾಚಾರ ಹೊರತೆಗೆಯುತ್ತಾರೆ ಎಂದು ಸರ್ಕಾರದವರು ಹೆದರುತ್ತಿದ್ದಾರೆ' ಎಂದು ಸಿದ್ದರಾಮಯ್ಯ ದೂರಿದರು.
ಸಿದ್ದರಾಮಯ್ಯ ಹಾಗೂ ಇತರೆ ನಾಯಕರು ಟ್ರ್ಯಾಕ್ಟರ್‌ನಲ್ಲೇ ಕುಳಿತಿದ್ದರು.
ರಾಜ್ಯ ಸರ್ಕಾರವು ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರ್‍ಯಾಲಿ ನಡೆಯಿತು. ಶಾಸಕರು ಹಾಗೂ ಮುಖಂಡರು ಪಾಲ್ಗೊಂಡಿದ್ದಾರೆ. ಸುವರ್ಣ ವಿಧಾನಸೌಧದವರೆಗೆ ಟ್ರ್ಯಾಕ್ಟರ್‌ನಲ್ಲಿ ತೆರಳಲಿದರು.
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಪ್ರವೇಶ ದ್ವಾರದಲ್ಲಿ ತಡೆದರು. ಅದನ್ನು ಖಂಡಿಸಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.#Belagavi #Congress #Siddaramaiah #TractorRally #KarnatakaAssemblySession pic.twitter.com/Qwv0KCRxsB
— Prajavani (@prajavani) December 16, 2021
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.