ಶುಕ್ರವಾರ, ಫೆಬ್ರವರಿ 26, 2021
31 °C

ಕೂಡಮಸಂಗಮ ಸ್ವಾಮೀಜಿ ಮುಖ್ಯಮಂತ್ರಿ ಜೊತೆ ಚರ್ಚೆಗೆ ಬರಲಿ: ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: 'ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎ ಮೀಸಲಾತಿ ವಿಷಯವಾಗಿ ಪಾದಯಾತ್ರೆ ಕೈಗೊಂಡಿರುವ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಜೊತೆ ಚರ್ಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ಧರಿದ್ದಾರೆ' ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಮೀಸಲಾತಿಗೆ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಸಮಾಜಕ್ಕೆ ಅವಕಾಶ ಸಿಗಬೇಕೆಂಬ ಆಸೆ ನಮ್ಮದು. ಸ್ವಾಮೀಜಿ ಹಾಗೂ ಅವರ ಸುತ್ತಲಿರುವ ಎಲ್ಲರೂ ಬುದ್ಧಿವಂತರಿದ್ದಾರೆ. ಹೋರಾಟದ ಜೊತೆಗೆ ಸ್ವಾಮೀಜಿಯು ಮುಖ್ಯಮಂತ್ರಿಯೊಂದಿಗೆ ಮಾತುಕತೆಗೂ ಬರಬೇಕು. ಸ್ವಾಮೀಜಿಯವರ ಬೇಡಿಕೆ, ಅದಕ್ಕೆ ಬೇಕಾದ ಪರಿಹಾರದ ಬಗ್ಗೆ ಮುಖ್ಯಮಂತ್ರಿ ಜೊತೆ ಕುಳಿತು ಚರ್ಚಿಸಬಹುದು. ಮುಖ್ಯಮಂತ್ರಿ  ತಮ್ಮ ಇತಿಮಿತಿಯಲ್ಲಿ ಬೇಡಿಕೆ ಈಡೇರಿಸಲು ಸಿದ್ಧರಿದ್ದಾರೆ ಎಂದರು.

ಬಸನಗೌಡ ಪಾಟೀಲ ಯತ್ನಾಳ ಸಿ.ಡಿ. ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
 
ಸೋಮವಾರ ಸಚಿವರಿಗೆ ಖಾತೆ ಹಂಚಿಕೆ ಆಗಲಿದೆ. ಯಾವುದೇ ಖಾತೆ ಕೊಟ್ಟರೂ ಸರ್ಕಾರ ಹಾಗೂ ಪಕ್ಷಕ್ಕೆ ಒಳ್ಳೆಯ ಹೆಸರು ತರುತ್ತೇನೆ. ಉಮೇಶ್ ಕತ್ತಿ ಅವರು ಎಂಟು ಬಾರಿ ಶಾಸಕರಾಗಿದ್ದಾರೆ. ಅವರ ಹಿರಿತನ ಆಧರಿಸಿ ಮುಖ್ಯಮಂತ್ರಿ ಸೂಕ್ತ ಸ್ಥಾನಮಾನ ನೀಡಲಿದ್ದಾರೆ. ನಾನು ಹಿಂದೆಯೂ ಯಾವುದೇ ಖಾತೆ ಕೇಳಿಲ್ಲ; ಈಗಲೂ ಕೇಳೋಲ್ಲ' ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು