ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪ್ರಮುಖ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿ

Last Updated 16 ಜೂನ್ 2020, 10:55 IST
ಅಕ್ಷರ ಗಾತ್ರ

ಬೆಳಗಾವಿ: ‘ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಕಚೇರಿಗಳನ್ನು ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿ ನಿರಂತರವಾಗಿ ಚಟುವಟಿಕೆಯಿಂದ ಕೂಡಿರುವಂತೆ ಮಾಡುವ ಜವಾಬ್ದಾರಿ ಎಲ್ಲ ಜನಪ್ರತಿನಿಧಿಗಳ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಮಠಕ್ಕೆ ಮಂಗಳವಾರ ಬಂದಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.

‘ಜಿಲ್ಲೆ ಸೇರಿದಂತೆ ಸಮಗ್ರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಜಿಲ್ಲೆಗೆ ಹೆಸರನ್ನು ಬೆಳಗಿಸಬೇಕು’ ಎಂದರು.

‘ಜಿಲ್ಲೆಗೆ ವಿಶೇಷ ಸ್ಥಾನಮಾನವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡಿವೆ. ನಾವೆಲ್ಲರೂ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸುತ್ತೇವೆ’ ಎಂದು ಕಡಾಡಿ ಹೇಳಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ ಹುಸೇನ್ ಪಠಾಣ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಮಾತನಾಡಿದರು. ಮುಖಂಡರಾದ ರಾಜು ಚಿಕ್ಕನಗೌಡರ, ಮಹಾಂತೇಶ ಒಕ್ಕುಂದ, ಸುರೇಶ ಯಾದವ, ಈರಯ್ಯ ಕೋತ್, ಈರಣ್ಣ ಅಂಗಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT