ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಪಂಚಮಸಾಲಿಗರಿಗೆ 5ಟಿಕೆಟ್‌ ಕೊಡಿ– ಬಸವಜಯ ಮೃತ್ಯುಂಜಯ ಸ್ವಾಮೀಜಿ

Published 15 ಫೆಬ್ರುವರಿ 2024, 12:36 IST
Last Updated 15 ಫೆಬ್ರುವರಿ 2024, 12:36 IST
ಅಕ್ಷರ ಗಾತ್ರ

ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಐದು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನವರು ಟಿಕೆಟ್ ನೀಡಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದವರೇ ಬಹುಸಂಖ್ಯಾತರು. ಹಾಗಾಗಿ ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದ ಇಬ್ಬರು, ಕಲ್ಯಾಣ ಕರ್ನಾಟಕದಲ್ಲಿ ಒಬ್ಬರಿಗೆ ಟಿಕೆಟ್‌ ಕೊಡಬೇಕು. ಇದಲ್ಲದೆ, ಮಲೆನಾಡಿನಲ್ಲಿ ಮಲೆಗೌಡ ಸಮುದಾಯಕ್ಕೆ ಮತ್ತು ಮೈಸೂರು ಭಾಗದಲ್ಲಿ ಲಿಂಗಾಯತ ಗೌಡ ಸಮುದಾಯಕ್ಕೆ ತಲಾ ಒಂದೊಂದು ಟಿಕೆಟ್ ನೀಡಬೇಕು’ ಎಂದರು.

‘ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಮೊದಲಿನಿಂದಲೂ ನಮ್ಮ ಸಮುದಾಯದವರೇ ಗೆಲ್ಲುತ್ತ ಬಂದಿದ್ದಾರೆ. ಹಾಗಾಗಿ ಎರಡೂ ರಾಷ್ಟ್ರೀಯ ಪಕ್ಷದವರು ಈ ಸಲವೂ ನಮ್ಮ ಸಮುದಾಯದವರಿಗೆ ಟಿಕೆಟ್‌ ಕೊಡಬೇಕೆಂದು ಮನವಿ ಮಾಡುವೆ’ ಎಂದ ಅವರು, ‘ಬೆಳಗಾವಿ ಕ್ಷೇತ್ರದಿಂದ ಈರಣ್ಣ ಕಡಾಡಿ ಮತ್ತು ಮಹಾಂತೇಶ ವಕ್ಕುಂದ ಬಿಜೆಪಿ ಟಿಕೆಟ್ ಕೇಳುತ್ತಿದ್ದಾರೆ. ಲಿಂಗಾಯತ ಕೋಟಾದಡಿ ಇನ್ನೂ ಅನೇಕರು ಟಿಕೆಟ್‌ ಕೇಳುತ್ತಿದ್ದಾರೆ. ಎಲ್ಲರ ಕಾರ್ಯದಕ್ಷತೆ, ಪಕ್ಷನಿಷ್ಠೆ ಪರಿಗಣಿಸಿ, ಯಾರಿಗಾದರೂ ಟಿಕೆಟ್‌ ಕೊಡಲಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT