ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಟ್ಟೆ ವಿತರಣೆ ನಿಲ್ಲಿಸದಿದ್ದರೆ ತೀವ್ರ ಹೋರಾಟ- ದಯಾನಂದ ಸ್ವಾಮೀಜಿ ಎಚ್ಚರಿಕೆ

Last Updated 20 ಡಿಸೆಂಬರ್ 2021, 15:50 IST
ಅಕ್ಷರ ಗಾತ್ರ

ಬೆಳಗಾವಿ: ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಿಸುವ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ರಾಣಿ ಚನ್ನಮ್ಮ ವೃತ್ತದಿಂದ ಸುವರ್ಣ ವಿಧಾನಸೌಧ ಸಮೀಪದ ಸುವರ್ಣ ಗಾರ್ಡನ್‌ಗೆ ತೆರಳಿ ಸಂತ ಸಮಾವೇಶ ನಡೆಸಿದರು.

‘ಯಾವುದೇ ಸಮುದಾಯದ ಮಕ್ಕಳ ಧಾರ್ಮಿಕ ಭಾವನೆಗಳಿಗೆ ಚ್ಯುತಿ ತರಬಾರದು. ಹೆಚ್ಚಿನ ಪೌಷ್ಟಿಕಾಂಶವಿರುವ ಸಸ್ಯಾಹಾರವನ್ನು ವಿತರಿಸಬೇಕು’ ಎಂದು ಒತ್ತಾಯಿಸಿದರು.

ಒಕ್ಕೂಟದ ಪ್ರಧಾನ ಸಂಚಾಲಕ ದಯಾನಂದ ಸ್ವಾಮೀಜಿ ಮಾತನಾಡಿ, ‘ಮೊಟ್ಟೆ ವಿತರಣೆ ಯೋಜನೆಯನ್ನು ಸರ್ಕಾರ ಕೈಬಿಡದಿದ್ದರೆ, ರಾಜ್ಯದಾದ್ಯಂತ ಸಸ್ಯಾಹಾರಿ ಸಮುದಾಯದ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ತೆರೆಯಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಚನ್ನಬಸವಾನಂದ ಸ್ವಾಮೀಜಿ, ನಾಗೇಂದ್ರದಾಸ್, ಪ್ರಭುಲಿಂಗ ಸ್ವಾಮೀಜಿ, ಬಸವ‍ಪ್ರಕಾಶ ಸ್ವಾಮೀಜಿ, ಬಸವಧರ್ಮ ಪೀಠದ ಗಂಗಾ ಮಾತಾಜೀ, ಅನ್ವಿಷಾನಂದ ಸ್ವಾಮೀಜಿ, ಸಂಪತರಾಜ್‌ ಬಾಗ್ರೆಚಾ, ಬಸವ ದೇವರು, ವೀರಣ್ಣ ಕೊರಲಳ್ಳಿ, ಮಹಾಂತೇಶ ಗುಡಸ್‌, ಸದ್ಯಾದೇವಿ ಮಾತಾಜೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT