15ರಂದು ಸಿಎಂಗೆ ಮಠಾಧೀಶರಿಂದ ಸನ್ಮಾನ

7

15ರಂದು ಸಿಎಂಗೆ ಮಠಾಧೀಶರಿಂದ ಸನ್ಮಾನ

Published:
Updated:

ಬೆಳಗಾವಿ: ಉತ್ತರ ಕರ್ನಾಟಕದ ವಿವಿಧ ಮಠಾಧೀಶರ ಹೋರಾಟಕ್ಕೆ ಸ್ಪಂದಿಸಿ ಸುವರ್ಣ ವಿಧಾನಸೌಧಕ್ಕೆ 9 ಸರ್ಕಾರಿ ಕಚೇರಿ ಸ್ಥಳಾಂತರಿಸುವ ನಿರ್ಣಯ ಕೈಗೊಂಡಿರುವುದರಿಂದ ಸೆ. 15ರಂದು ಮಧ್ಯಾಹ್ನ 2ಕ್ಕೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಸುವರ್ಣ ವಿಧಾನಸೌಧದಲ್ಲಿ ಗೌರವಿಸಲಾಗುವುದು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

‘ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಆ.31ರಂದು ಮಠಾಧೀಶರು ಹೋರಾಟ ನಡೆಸಿದ ಫಲವಾಗಿ ಕಚೇರಿಗಳ ಸ್ಥಳಾಂತರಕ್ಕೆ ನಿರ್ಧರಿಸಿರುವುದು ಸ್ವಾಗತಾರ್ಹ. ಹೀಗಾಗಿ, ಮಠಾಧೀಶರ ವತಿಯಿಂದ ಸತ್ಕರಿಸಲಾಗುವುದು’ ಎಂದು ಹೇಳಿದ್ದಾರೆ.

ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಸಿದ್ಧರಾಮ ಸ್ವಾಮೀಜಿ, ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !