ಭಾನುವಾರ, ಅಕ್ಟೋಬರ್ 24, 2021
21 °C

‘ಸಮಾಜ ಸುಧಾರಣೆ: ಮಠಗಳ ಕೊಡುಗೆ ಅಪಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ‘ಸಮಾಜ ಸುಧಾರಣೆಯಲ್ಲಿ ಮಠಗಳು ಹಾಗೂ ಸ್ವಾಮೀಜಿಗಳ ಕೊಡುಗೆ ಅಪಾರವಾಗಿದೆ’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಇಲ್ಲಿನ ಶೆಟ್ಟರ ಮಠದಲ್ಲಿ ಮಂಗಳವಾರ ನಡೆದ ಲಿಂ.ಮರುಳಸಿದ್ಧ ಶಿವಯೋಗಿಗಳ 129ನೇ ಪುಣ್ಯಸ್ಮರಣೋತ್ಸವ ಹಾಗೂ ಗಚ್ಚಿನಮಠದ ಮುರುಘೇಂದ್ರ ಶಿವಯೋಗಿಗಳ ಲಿಂಗೈಕ್ಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭಾರತವು ಶರಣರು–ಸಂತರ ತಪೋಭೂಮಿ. ಇಲ್ಲಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯು ಜಗತ್ತಿನಲ್ಲಿಯೇ ಪ್ರಖ್ಯಾತಿ ಹೊಂದಿದೆ. ನೂರಾರು ಜಾತಿಗಳಿದ್ದರೂ ಎಲ್ಲರೂ ಶಾಂತಿ–ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಇದು ನಮ್ಮ ದೇಶದ ವಿಶೇಷ’ ಎಂದರು.

‘ದೇವಸ್ಥಾನಗಳು ಹಾಗೂ ಮಠಗಳ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ತಾಲ್ಲೂಕಿನ ಧಾರ್ಮಿಕ ಕ್ಷೇತ್ರಗಳು, ಮಠಗಳ ಪ್ರಗತಿಗೆ ಲಕ್ಷಾಂತರ ರೂಪಾಯಿ ಅನುದಾನ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇನ್ನೂ ಹೆಚ್ಚಿನ ಅನುದಾನ ತಂದು ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ, ವೀರೇಶ್ವರ ಸ್ವಾಮೀಜಿ, ಹಲ್ಯಾಳದ ಗುರುಸಿದ್ಧ ಸ್ವಾಮೀಜಿ, ನದಿಇಂಗಳಗಾವದ ಸಿದ್ದಲಿಂಗ ಸ್ವಾಮೀಜಿ, ಕಾಂಗ್ರೆಸ್ ಮುಖಂಡರಾದ ಗಜಾನನ ಮಂಗಸೂಳಿ, ಧರೆಪ್ಪ ಠಕ್ಕಣ್ಣವರ, ಬಿಜೆಪಿ ಮುಖಂಡ ನಿಂಗಪ್ಪ ನಂದೇಶ್ವರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.