ಬೆಳಗಾವಿ: ಬೆಂಗಳೂರಿನಲ್ಲಿ ಈಚೆಗೆ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ, ತಾಲ್ಲೂಕಿನ ಕಡೋಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ ಜ್ಯೋತಿ ಕೋರಿ (ಹೊಸಟ್ಟಿ) ಅವರು ಮೂರು ಚಿನ್ನದ ಪದಕ ಪಡೆದಿದ್ದಾರೆ.
100 ಮೀಟರ್ ಬ್ಯಾಕ್‌ಸ್ಟ್ರೋಕ್, 100 ಮೀಟರ್ ಫ್ರೀಸ್ಟೈಲ್, 400 ಮೀಟರ್ ಫ್ರೀಸ್ಟೈಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಬಾಚಿಕೊಂಡಿದ್ದಾರೆ. ಮುಂದೆ ನಡೆಯುವ ಸರ್ಕಾರಿ ನೌಕರರ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
2018ರಿಂದ ಈಜು ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಅವರು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ 100ಕ್ಕೂ ಅಧಿಕ ಪದಕ ಪಡೆದಿದ್ದಾರೆ.