ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನುಬಾಹಿರವಾಗಿ ಬ್ಯಾನರ್‌ ಅಳವಡಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ

Last Updated 8 ಮಾರ್ಚ್ 2021, 15:07 IST
ಅಕ್ಷರ ಗಾತ್ರ

ಬೆಳಗಾವಿ: ‘ಇಲ್ಲಿನ ನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಹಜ ಸೌಂದರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಹಾಗೂ ಅಪಘಾತಕ್ಕೆ ಕಾರಣವಾಗುವಂತೆ ಫ್ಲೆಕ್ಸ್‌ಗಳು ಹಾಗೂ ಬ್ಯಾನರ್‌ಗಳನ್ನು ಕಾನೂನುಬಾಹಿರವಾಗಿ ಹಾಕಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಅಧ್ಯಕ್ಷ ಎಚ್‌.ಜಿ. ರಮೇಶ್‌ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾದ ‘ನಮ್ಮ ಜನ ನಮ್ಮ ಧ್ವನಿ’ ವಿಶೇಷ ವರದಿಯನ್ನು ಉಲ್ಲೇಖಿಸಿ ಅವರು ಮನವಿ ಸಲ್ಲಿಸಿದ್ದು, ‘ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಜಾಹೀರಾತು ಫಲಕ, ಫ್ಲೆಕ್ಸ್‌, ಬ್ಯಾನರ್ ಅಥವಾ ಬಂಟಿಂಗ್‌ಗಳನ್ನು ಹಾಕುವುದಕ್ಕೆ ನಿರ್ಬಂಧ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ. ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆದೇಶಿಸಿದೆ. ಇದನ್ನು ಆಧರಿಸಿ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಸಾರ್ವಜನಿಕ ಹಿತಾಸಕ್ತಿಯ ಈ ದೂರನ್ನು ಗಂಭೀರವಾಗಿ ಪರಿಗಣಿಸಬೇಕು. ಹೈಕೋರ್ಟ್‌ ಆದೇಶ ಪಾಲಿಸುವ ಮೂಲಕ ನಗರದ ಸೌಂದರ್ಯ ಕಾಪಾಡುವ ಜೊತೆಗೆ, ಅಪಘಾತಗಳನ್ನು ತಪ್ಪಿಸಬೇಕು’ ಎಂದು ಕೋರಿದ್ದಾರೆ.

ಗೌರವಾಧ್ಯಕ್ಷ ಶಿವಕುಮಾರ ಭೋಜಶೆಟ್ಟರ, ಜಿಲ್ಲಾ ಘಟಕದ ಅಧ್ಯಕ್ಷ ಹುಸೇನ ನದಾಫ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT