ಶುಕ್ರವಾರ, ಡಿಸೆಂಬರ್ 3, 2021
20 °C

ಬೆಳಗಾವಿಯಲ್ಲಿ ತಲ್ವಾರ್ ಹಿಡಿದು ಸಂಭ್ರಮ: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಖಾನಾಪುರ ರಸ್ತೆಯ ಪೀರನವಾಡಿ ‌ಕ್ರಾಸ್ ಬಳಿಯ ಬ್ರಹ್ಮನಗರದಲ್ಲಿನ ಹನುಮಾನ ದೇವಸ್ಥಾನದ ಆವರಣದಲ್ಲಿ ತಲ್ವಾರ್‌ಗಳನ್ನು ಪ್ರದರ್ಶಿಸುತ್ತಾ, ಝಳಪಿಸುತ್ತಾ ನೃತ್ಯ ಮಾಡಿದ್ದ ನೂರಕ್ಕೂ ಹೆಚ್ಚು ಮಂದಿಯ ವಿರುದ್ಧ ಉದ್ಯಮಬಾಗ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಯುಧಪೂಜೆ ಅಂಗವಾಗಿ ಬಜರಂಗ ದಳದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಲ್ಲಿ ಬಹುತೇಕರು ರಸ್ತೆಯಲ್ಲೇ ತಲ್ವಾರ್‌ಗಳನ್ನು ಹಿಡಿದು ಸಂಭ್ರಮದಲ್ಲಿ ಭಾಗಿಯಾಗಿದ್ದರು. ಸಾರ್ವಜನಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೆರೆದಿದ್ದವರು ತಲ್ವಾರ್‌ಗಳನ್ನು ಹಿಡಿದು ಸಂಭ್ರಮಿಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು