ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ | ಶಿಕ್ಷಕ ಮತದಾರರಿಗೆ ಎಣ್ಣೆ ಪಾರ್ಟಿ: ಫೋಟೊ, ವಿಡಿಯೊ ವೈರಲ್

Last Updated 12 ಜೂನ್ 2022, 8:27 IST
ಅಕ್ಷರ ಗಾತ್ರ

ಬೆಳಗಾವಿ: ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲು ತಡರಾತ್ರಿ ಮದ್ಯ ಹಾಗೂ ಮಾಂಸಾಹಾರದ ಪಾರ್ಟಿ ಮಾಡಿದ್ದಾರೆ ಎನ್ನಲಾದ ಕೆಲವು ಫೋಟೊ ಹಾಗೂ ವಿಡಿಯೂ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ರಾಷ್ಟ್ರೀಯ ಪಕ್ಷವೊಂದರ ಕಚೇರಿ ಆವರಣದಲ್ಲಿ ಈ ಪಾರ್ಟಿ ಮಾಡಲಾಗಿದೆ. ಅಭ್ಯರ್ಥಿಯೇ ಭರ್ಜರಿ ಪಾರ್ಟಿ ಕೊಟ್ಟಿದ್ದಾರೆ. ಹಲವು ಶಿಕ್ಷಕರು ಇದರಲ್ಲಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಪಕ್ಷದ ಕಚೇರಿಯು ಚಿಕ್ಕೋಡಿ ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿಗೆ ಹೊಂದಿಕೊಂಡೇ ಇದೆ. ಆದರೂ ಪಾರ್ಟಿ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT