ಶಿಕ್ಷಕರಿಗೆ ಬಡ್ತಿ ನೀಡಲು ಒತ್ತಾಯ
ಬೆಳಗಾವಿ: ಬಡ್ತಿ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಪ್ರಾಥಮಿಕ ಶಾಲಾ ಸರ್ಕಾರಿ ಶಿಕ್ಷಕರ ಸಂಘ ಜಿಲ್ಲಾ ಘಟಕದವರು ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಆನಂದ ಪುಂಡಲೀಕ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.
‘ಜಿಲ್ಲೆಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರನ್ನು ‘ಸಿ’ ವಲಯದಿಂದ ‘ಬಿ’, ‘ಬಿ’ಯಿಂದ ‘ಎ’ ವಲಯಕ್ಕೆ ಕೌನ್ಸೆಲಿಂಗ್ ಮೂಲಕ ವರ್ಗಾಯಿಸಬೇಕು. ಈಗಾಗಲೇ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಅದಕ್ಕಿಂತ ಮುಂಚೆ ಪೂರ್ವ ಪ್ರಾಥಮಿಕ ಶಾಲಾ ಸಹಶಿಕ್ಷಕ ಹುದ್ದೆಯಿಂದ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಹುದ್ದೆಯಿಂದ ಪದವಿಧರೇತರ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡಬೇಕು. ಹಿರಿಯ ಪ್ರಾಥಮಿಕ ಶಾಲೆಗಳಿಗೆ ಹಿಂದಿ ಶಿಕ್ಷಕರ ವರ್ಗಾವಣೆ ಮಾಡುವುದಕ್ಕಾಗಿ ಅಗತ್ಯ ಹುದ್ದೆ ಸೃಜಿಸಬೇಕು’ ಎಂದು ಒತ್ತಾಯಿಸಿದರು.
ಅವರಿಗೆ ಮುಖ್ಯೋಪಾಧ್ಯಾಯರ ಸಂಘ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಸುಣಗಾರ ಬೆಂಬಲ ವ್ಯಕ್ತಪಡಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ ಗಣಾಚಾರಿ, ಖಾನಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎನ್. ಚಚಡಿ, ಪ್ರಧಾನ ಕಾರ್ಯದರ್ಶಿ ಬಿ.ಎಚ್. ಮುಂದಿನಮನಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.