ಶನಿವಾರ, ನವೆಂಬರ್ 23, 2019
18 °C

‘ತಂತ್ರಜ್ಞಾನವನ್ನು ಸಮಾಜಕ್ಕೆ ತಿಳಿಸಿ’

Published:
Updated:
Prajavani

ಬೆಳಗಾವಿ: ‘ಬೆಳೆಯುತ್ತಿರುವ ಈ ಯುಗದಲ್ಲಿ ತಂತ್ರಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳನ್ನು ಸಮಾಜಕ್ಕೆ ತಿಳಿಸುವುದು ಎಂಜಿನಿಯರಿಂಗ್ ಪದವೀಧರರ ಪ್ರಮುಖ ಜವಾಬ್ದಾರಿಯಾಗಿದೆ’ ಎಂದು ವಿಜಿಎಸ್‌ಟಿ ಸಲಹೆಗಾರ ಡಾ.ಶ್ರೀಕಂಠೇಶ್ವರಸ್ವಾಮಿ ಹೇಳಿದರು.

ಇಲ್ಲಿನ ಕೆಎಲ್‌ಎಸ್ ಗೋಗಟೆ ತಾಂತ್ರಿಕ ಕಾಲೇಜಿನಲ್ಲಿ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಿ.ಇ. ಮುಗಿಸಿ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಕಲಿತ ಸಂಸ್ಥೆಗಳನ್ನು ಮರೆಯದೇ ಬ್ರಾಂಡ್ ಅಂಬಾಸಿಡರ್ ಆಗಬೇಕು. ಹೊಸ ತಂತ್ರಜ್ಞಾನ ಅಥವಾ ಬೆಳವಣಿಗೆಗಳನ್ನು ಸಂಸ್ಥೆಯ ಜೊತೆ ಹಂಚಿಕೊಳ್ಳಬೇಕು. ಇದರಿಂದ, ಪಠ್ಯಕ್ರಮದಲ್ಲಿ ಪರಿಣಾಮಕಾರಿ ಬದಲಾವಣೆ ತಂದು ಅದನ್ನು ಅನುಷ್ಠಾನಗೊಳಿಸುವುದರಿಂದ ಮುಂದಿನ ಪದವೀಧರರಿಗೆ ಸಹಾಯವಾಗುತ್ತದೆ’ ಎಂದು ತಿಳಿಸಿದರು.

‘ಸಂಸ್ಥೆಗಳಿಂದ ನೀಡುವ ಮಾನ್ಯತೆ ವಿದ್ಯಾರ್ಥಿಗಳಲ್ಲಿ ವಿಶ್ವಾಸ ಹೆಚ್ಚಿಸುತ್ತದೆ. ಹೆಚ್ಚಿನ ಸಾಧಿನೆಗೆ ಪ್ರೋತ್ಸಾಹಿಸುತ್ತದೆ. ಈ ನಿಟ್ಟಿನಲ್ಲಿ ಗೋಗಟೆ ಕಾಲೇಜಿನ ಪರಂಪರೆ ಅಭಿನಂದನಾರ್ಹ’ ಎಂದರು.

‘ಹೊಸ ಆಲೋಚನೆ ಹಾಗೂ ಸಂಶೋಧನೆಗಳನ್ನು ನೋಂದಾಯಿಸಿಕೊಳ್ಳಬೇಕು. ಬೌದ್ಧಿಕ ಆಸ್ತಿ ಹಕ್ಕುಗಳನ್ನು (ಐಪಿಆರ್) ರಕ್ಷಿಸುವುದು ಬಹಳ ಮುಖ್ಯ. ಏಕೆಂದರೆ, ಅದು ದೇಶದ ಆರ್ಥಿಕತೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬಹುದು’ ಎಂದು ಹೇಳಿದರು.

122 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ದಾನಿಗಳು, ಶಿಕ್ಷಣ ತಜ್ಞರು ಮತ್ತು ಹಳೆಯ ವಿದ್ಯಾರ್ಥಿಗಳ ದತ್ತಿ ನಿಧಿಯ ಪ್ರಶಸ್ತಿಗಳನ್ನು ನೀಡಲಾಯಿತು.

ಜಿಐಟಿ ಆಡಳಿತ ಮಂಡಳಿ ಅಧ್ಯಕ್ಷ ಯು.ಎನ್. ಕಾಲಕುಂದ್ರಿಕರ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಪ್ರೊ.ಡಿ.ಎ. ಕುಲಕರ್ಣಿ ಸ್ವಾಗತಿಸಿದರು. ಪ್ರೊ.ಬಲವಂತ ಪಾಟೀಲ ಪರಿಚಯಿಸಿದರು. ಪ್ರೊ.ರಶ್ಮಿ ಅಡೂರ್ ಹಾಗೂ ಪ್ರೊ.ಜಾಹ್ನವಿ ಕಾರೇಕರ್ ನಿರೂಪಿಸಿದರು. ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಡಾ.ಡಿ.ಆರ್. ಜೋಶಿ ವಂದಿಸಿದರು. 

ಪ್ರತಿಕ್ರಿಯಿಸಿ (+)