ಶುಕ್ರವಾರ, ನವೆಂಬರ್ 27, 2020
20 °C

ತೆಲಸಂಗ: ರಸ್ತೆ ಅಭಿವೃದ್ಧಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೆಲಸಂಗ: ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜೇವರ್ಗಿ– ಸಂಕೇಶ್ವರ ರಾಜ್ಯ ಹೆದ್ದಾರಿ ಸಂಪರ್ಕಿಸುವ ಗೋಠೆ ರಸ್ತೆ ಹದಗೆಟ್ಟಿರುವ ಪರಿಣಾಮ ಜನರು ತೊಂದರೆ ಅನುಭವಿಸುತ್ತಿದ್ದಾರೆ.

‘ಹೊಲ–ಗದ್ದೆಗಳಿಗೆ ತೆರಳಲು ಈ ರಸ್ತೆ ಬಿಟ್ಟರೆ ಪರ್ಯಾಯ ಮಾರ್ಗವಿಲ್ಲ. ಮಳೆ ಸುರಿದರೆ ಸಾಕು ಈ ರಸ್ತೆಯಲ್ಲಿ ವಾಹನಗಳ ಓಡಾಟ ಅಸಾಧ್ಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕೆಸರು ಗದ್ದೆಯಂತಾಗುತ್ತದೆ. ಕೃಷಿ ಕೆಲಸಕ್ಕೆ ತೆರಳುವ ರೈತರು ಹೈರಾಣಾಗುತ್ತಿದ್ದಾರೆ. ಪ್ರತಿ ಮಳೆಗಾಲದಲ್ಲೂ ತೊಂದರೆ ತಪ್ಪಿಲ್ಲ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದರೂ ಸ್ಪಂದನೆ ದೊರೆತಿಲ್ಲ’ ಎಂದು ಗ್ರಾಮಸ್ಥರು ದೂರಿದ್ದಾರೆ.

‘ಕೂಡಲೇ ರಸ್ತೆ ಸುಧಾರಣೆಗೆ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಪಂಚಾಯಿತಿಗೆ ಮುತ್ತಿಗೆ ಹಾಕಬೇಕಾಗುತ್ತದೆ’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

‘ರಸ್ತೆಗಳ ಅಭಿವೃದ್ಧಿಗೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ. ಗೋಠೆ ರಸ್ತೆ ಹದಗೆಟ್ಟಿರುವುದು ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅನುಮತಿ ಪಡೆದು ತುರ್ತಾಗಿ ದುರಸ್ತಿಪಡಿಸಲಾಗುವುದು’ ಎಂದು ಪಿಡಿಒ ಬೀರಪ್ಪ ಕಡಗಂಚಿ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.