ಬುಧವಾರ, ಜುಲೈ 28, 2021
28 °C

‘ದೇವಸ್ಥಾನಗಳಿಂದ ನೆಮ್ಮದಿಯ ವಾತಾವರಣ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ತಾಲ್ಲೂಕಿನ ಮಾವಿನಕಟ್ಟಿ ಗ್ರಾಮದ ಗ್ರಾಮದೇವತೆ ಮಹಾಲಕ್ಷ್ಮಿ ಮಂದಿರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಮುಖಂಡ ಶಂಕರಗೌಡ ಪಾಟೀಲ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪೂಜೆ ನೆರವೇರಿಸಿ ಭಾನುವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಚನ್ನರಾಜ, ‘ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕ್ರಮ ವಹಿಸಿದ್ದಾರೆ. ಈ ದೇವಸ್ಥಾನಕ್ಕೆ ನೂರು ವರ್ಷಗಳ ಇತಿಹಾಸವಿದ್ದು, ಕಟ್ಟಡ ಶಿಥಿಲಾವಸ್ಥೆಗೆ ತಲುಪಿರುವುದನ್ನು ಗಮನಿಸಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಶಾಸಕರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು ನೀಡುತ್ತಿದ್ದಾರೆ’ ಎಂದರು.

‘ದೇಗುಲಗಳಿಂದ ಗ್ರಾಮದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತದೆ. ಜನರೆಲ್ಲ ಒಗ್ಗಟ್ಟಿನಿಂದ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಅಭಿವೃದ್ಧಿಗೂ ಕೈಜೋಡಿಸಬೇಕು’ ಎಂದು ಸಲಹೆ ನೀಡಿದರು.

ಮುಖಂಡರಾದ ನೀಲೇಶ ಚಂದಗಡಕರ, ಉಳವಪ್ಪ ಮಲ್ಲಣ್ಣವರ, ಶಂಕರಗೌಡ ರುದ್ರಗೌಡ ಪಾಟೀಲ, ರಾಜು ಅರಗಂಜಿ, ಶಂಕ್ರಯ್ಯ ಮಹಾದೇವ ಹಿರೇಮಠ, ನಾಗಪ್ಪ ಇಟಗಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು