ಬೆಳಗಾವಿ: ‘ಕೋವಿಡ್–19 ಮೂರನೇ ಅಲೆ ಬರಬಹುದೆಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ, ಸೋಂಕಿನ ಪ್ರಕರಣಗಳು ಹೆಚ್ಚಿರುವ ನೆರೆಯ ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

‘ಕೋವಿಡ್ ನಿವಾರಣೆ ದೃಷ್ಟಿಯಿಂದಾಗಿ, ಮಹಾರಾಷ್ಟ್ರದಿಂದ ಜಿಲ್ಲೆಯ ಎಲ್ಲ ಗಡಿಗಳ ಮೂಲಕ ಬರುವವರನ್ನು ಪರೀಕ್ಷೆಗೆ ಒಳಪಡಿಸುವ ಕಾರ್ಯ ಅತ್ಯಂತ ಕಟ್ಟುನಿಟ್ಟಾಗಿ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಆರೋಗ್ಯ, ಕಂದಾಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿಯನ್ನು ನಿಭಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದ್ದಾರೆ.

‘ಕರ್ತವ್ಯಲೋಪ ಎಸಗುವಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ತಿಳಿಸಿದ್ದಾರೆ.

ಈ ಸೂಚನೆಗಳನ್ನು ಪ್ರಾದೇಶಿಕ ಆಯುಕ್ತರು, ಉತ್ತರ ವಲಯ ಐಜಿಪಿ ಹಾಗೂ ಎಸ್ಪಿಗೂ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.