ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿಯಲ್ಲಿ ಟಿಇಟಿ ಸುಗಮ

Published 30 ಜೂನ್ 2024, 13:41 IST
Last Updated 30 ಜೂನ್ 2024, 13:41 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸುಗಮವಾಗಿ ನಡೆಯಿತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಗಳಲ್ಲಿ ಪರೀಕ್ಷೆ ನಡೆದವು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 3,972 ಅಭ್ಯರ್ಥಿಗಳ ಪೈಕಿ 3,545 ಅಭ್ಯರ್ಥಿಗಳು ಹಾಜರಾದರು. 427 ಅಭ್ಯರ್ಥಿಗಳು ಗೈರಾಗಿದ್ದರು. ದ್ವಿತೀಯ ಪರೀಕ್ಷೆಗೆ 6,151 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,677 ಅಭ್ಯರ್ಥಿಗಳು ಹಾಜರಾದರೆ, 474 ಅಭ್ಯರ್ಥಿಗಳು ಗೈರು ಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 3,291 ಅಭ್ಯರ್ಥಿಗಳ ಪೈಕಿ 2,944 ಮಂದಿ ಹಾಜರಾದರೆ, 347 ಅಭ್ಯರ್ಥಿಗಳು ಗೈರಾಗಿದ್ದರು. ದ್ವಿತೀಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,045 ಅಭ್ಯರ್ಥಿಗಳ ಪೈಕಿ 4,692 ಮಂದಿ ಬರೆದರು. 353 ಅಭ್ಯರ್ಥಿಗಳು ಗೈರು ಹಾಜರಾದರು.

‘ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಯಾವ ಗೊಂದಲವೂ ಇಲ್ಲದೆ ಪರೀಕ್ಷೆ ಸುಗಮವಾಗಿ ನಡೆದಿವೆ’ ಎಂದು ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT