ಶುಕ್ರವಾರ, ಅಕ್ಟೋಬರ್ 30, 2020
26 °C

ಎಸ್‌ಟಿ ಪ್ರಮಾಣ ಪತ್ರಕ್ಕೆ ತಳವಾರ ಸಮಾಜದವರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ‘ತಳವಾರ ಸಮಾಜ ಎಸ್‌ಟಿ ಹೋರಾಟ ಸಮಿತಿ’ಯವರು ಇಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದರು.

ತಲೆಗೆ ಕಪ್ಪುಪಟ್ಟಿ ಕಟ್ಟಿಕೊಂಡು, ಕಪ್ಪು ಬಾವುಟಗಳನ್ನು ಹಿಡಿದು ಪಾಲ್ಗೊಂಡಿದ್ದ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡ ವಿವಿಧ ಗ್ರಾಮಗಳ ನೂರಾರು ಜನರು ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು.

ಮುಖಂಡ ಸಂಜೀವ ಗಡ್ಯಾಗೋಳ ಮಾತನಾಡಿ, ‘ಸಮಾಜಕ್ಕೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ನೀಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಇದಾಗಿ 6 ತಿಂಗಳುಗಳೆ ಕಳೆದಿದ್ದರೂ ರಾಜ್ಯ ಸರ್ಕಾರದಿಂದ ಪ್ರಮಾಣಪತ್ರ ಕೊಡುತ್ತಿಲ್ಲ. ತಹಶೀಲ್ದಾರ್‌, ಶಾಸಕರು, ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಸಚಿವರು, ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೂ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಈ ಮೂಲಕ ನಮ್ಮ ಹಕ್ಕನ್ನು ಕಸಿದುಕೊಳ್ಳಲಾಗಿದೆ’ ಎಂದು ದೂರಿದರು.

ಮುಖಂಡ ಪ್ರಕಾಶ ಕೋಳಿ, ‘10 ದಿನಗಳಲ್ಲಿ ಸಮಾಜಕ್ಕೆ ಪರಿಶಿಷ್ಟ ಪಂಗಡಕ್ಕೆ ಪ್ರಮಾಣಪತ್ರ ವಿತರಣೆ ಮಾಡದಿದ್ದರೆ ಮುಂಬರುವ ಪಂಚಾಯಿತಿ ಚುನಾವಣೆ ಬಹಿಷ್ಕರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಅಶೋಕ ಗಳ್ಳಗಾಂವಿ, ಬಾಪು ಗಸ್ತಿ, ಪ್ರಲ್ಹಾದ ಪೂಜಾರಿ, ತಮ್ಮಣ್ಣ ಮೀಷಿ, ಶಂಕರ ಕೋಳಿ, ರಾಮಗೊಂಡ ಜಿಂಗಿ, ನೀಲಕಂಠ ಈಟಿ, ಶ್ರೀಶೈಲ ದಳವಾಯಿ, ಅಪ್ಪಾಸಾಬ ಸನದಿ, ವಿಶ್ವನಾಥ ಖೇಮಲಾಪೂರ, ಮಹಾದೇವ ಚಿಪ್ಪಾಡಿ, ದಶರಥ ಅಂಬಿ, ಕುಮಾರ ಗಸ್ತಿ, ಮಹಾದೇವ ಡಂಗಿ, ವಸಂತ ತಳವಾರ, ಧನಪಾಲ ಸನದಿ, ಮಹಾದೇವ ನಾಯಿಕ, ರವೀಂದ್ರ ಜಾಗವಾನಕರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.