ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ: ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Published 11 ಮಾರ್ಚ್ 2024, 15:35 IST
Last Updated 11 ಮಾರ್ಚ್ 2024, 15:35 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಭಾನುವಾರ ರಾತ್ರಿ ಗೃಹಿಣಿಯೊಬ್ಬರು ಸೀರೆಯಿಂದ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಕರೋಶಿ ನಿವಾಸಿ ಜುವೇರಿಯಾ ಜಾವೇದ್ ಮುಲ್ಲಾ (28) ಸಾವಿಗೀಡಾದವರು. ‘ಜುವೇರಿಯಾ ಹಾಗೂ ಪತಿ ಜಾವೇದ್‌ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಈ ಸಾವಿನಲ್ಲಿ ಅನುಮಾನ ಇದೆ’ ಎಂದು ಮೃತರ ತಾಯಿ ಮಹಾರಾಷ್ಟ್ರದ ಇಚಲಕರಂಜಿಯ ಅಫ್ಸಾನಾ ಕರೀಂ ಮುಲ್ಲಾ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಚಿಕ್ಕೋಡಿ ಸಿಪಿಐ ನಾಗೇಶ ಕಾಡದೇವರಮಠ, ಪಿಎಸ್ಐ ಸಚಿನ ದಾಸರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಮರಣೋತ್ತರ ಪರೀಕ್ಷೆಯ ಬಳಿಕ ಶವ ಹಸ್ತಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT