ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ಅವರನ್ನು ಧಾರವಾಡದ ಹೈಕೋರ್ಟ್ ಪೀಠ ನಿರ್ದೋಷಿ ಎಂದು ತೀರ್ಪು ನೀಡಿದೆ.

ದೇಶದಾದ್ಯಂತ ದೊಡ್ಡ ಸದ್ದು ಮಾಡಿದ್ದ ಈ ತ್ರಿವಳಿ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿತ್ತು. ಆದರೆ, ಹೈಕೋರ್ಟ್ದ್ವಿಸದಸ್ಯ ಪೀಠವು ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ನೀಡಿ, ಆರೋಪಿಯನ್ನು ಬಿಡುಗಡೆ ಮಾಡಿದೆ.

ರಾಜ್ಯದ ಜನರನ್ನು ಬೆಚ್ಚಿಬೀಳಿಸಿದ್ದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಂತಾಗಿದೆ.

2015ರ ಆಗಸ್ಟ್ 16ರಂದು ನಸುಕಿನ ಜಾವ ಇಲ್ಲಿನ ಕುವೆಂಪುನಗರದ ಮನೆಯಲ್ಲಿ ತ್ರಿವಳಿ ಕೊಲೆ ನಡೆದಿತ್ತು.

ಗೃಹಿಣಿ ರೀನಾ ಮಾಲಗತ್ತಿ, ಅವರ ಮಕ್ಕಳಾದ ಆದಿತ್ಯ ಹಾಗೂ ಸಾಹಿತ್ಯ ಅವರನ್ನು ಬೆಡ್ ರೂಮಿನಲ್ಲೇ ಕೊಲೆ ಮಾಡಲಾಗಿತ್ತು. ರೀನಾ ಅವರೂಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪ್ರವೀಣ್ ಭಟ್ ಈ ಕೊಲೆ ಮಾಡಿದ್ದಾಗಿ, ರೀನಾ ಅವರ ಸಹೋದರ ದೂರು ದಾಖಲಿಸಿದ್ದರು.

ಪೊಲೀಸರು 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್‌ಗೆಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಆದರೆ, ಈ ಆದೇಶವನ್ನು ತಡೆಹಿಡಿದ ಧಾರವಾಡ ಹೈಕೋರ್ಟ್ಪೀಠವು, ಇದೇ ಜೂನ್ 21ರಂದು ಆರೋಪಿಯನ್ನು ಖುಲಾಸೆ ಮಾಡಿದೆ.

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಎಂ.ಜಿ.ಎಸ್ ಕಮಲ್ ಅವರಿದ್ದ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಓದಿ...ಬೆಳಗಾವಿ:ಬೆಚ್ಚಿ ಬೀಳಿಸಿದ್ದತ್ರಿವಳಿ ಕೊಲೆ, ಆರೋಪಿ ನಿರ್ದೋಷಿಯಾಗಿದ್ದು ಏಕೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.