‘ಮುಡಾ’ ಹಗರಣ ವಿರೋಧಿಸಿ ಬಿಜೆಪಿ ನಾಯಕರು ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಸಿದ ಪಾದಯಾತ್ರೆ ಪೂರ್ಣಗೊಂಡ ಬಳಿಕ ಆಗಸ್ಟ್ 11ರಂದು ಬೆಳಗಾವಿಯ ರೆಸಾರ್ಟ್‌ನಲ್ಲಿ ಬಿಜೆಪಿಯ ಅತೃಪ್ತ ನಾಯಕರು ಸಭೆ ನಡೆಸಿದ್ದರು. ಶಾಸಕರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಪ್ರತಾಪ ಸಿಂಹ, ಜಿ.ಎಂ.ಸಿದ್ಧೇಶ್ವರ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಜೆಡಿಎಸ್ ಮುಖಂಡ ಎನ್.ಆರ್ ಸಂತೋಷ ಸೇರಿ ಹಲವು ಮುಖಂಡರು ಪಾಲ್ಗೊಂಡಿದ್ದರು.