ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮದುರ್ಗ | ಬಾಲಕನ ರಕ್ಷಿಸಲು ಹೋದ ವ್ಯಕ್ತಿ ಸಾವು

Published 14 ಏಪ್ರಿಲ್ 2024, 16:12 IST
Last Updated 14 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ರಾಮದುರ್ಗ: ತಾಲ್ಲೂಕಿನ ಅವರಾದಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ಮುಳುಗುತ್ತಿದ್ದ 14 ವರ್ಷದ ಬಾಲಕನ ರಕ್ಷಿಸಲು ಮುಂದಾದ ವ್ಯಕ್ತಿಯೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಶ್ರೀಶೈಲ ಈರಪ್ಪ ಮುದಕನ್ನವರ (45) ಮೃತರು. ‘ಬಾಲಕ ವಿಜಯ ಹೊಳೆನ್ನವರ ನದಿಯಲ್ಲಿ  ಮುಳುಗುತ್ತಿದ್ದಾಗ ರಕ್ಷಣೆಗೆ ಶ್ರೀಶೈಲ ಧಾವಿಸಿದ್ದರು. ಬಾಲಕನನ್ನು ರಕ್ಷಿಸಿದ ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ಶ್ರೀಶೈಲ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸುರೇಬಾನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT