ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಜಲಗಿ | ಕಳವು ಪ್ರಕರಣ; ಜಾಗೃತಿಗೆ ಸಲಹೆ

Published 17 ಡಿಸೆಂಬರ್ 2023, 14:04 IST
Last Updated 17 ಡಿಸೆಂಬರ್ 2023, 14:04 IST
ಅಕ್ಷರ ಗಾತ್ರ

ಕೌಜಲಗಿ: ಇತ್ತೀಚೆಗೆ ಮನೆ, ಅಂಗಡಿಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರು ಜಾಗೃತರಾಗಿರಬೇಕೆಂದು ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಪಿಎಸ್‌ಐ ಗೋವಿಂದೇಗೌಡ ಪಾಟೀಲ ತಿಳಿಸಿದ್ದಾರೆ.

ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ತಮ್ಮ ಬೆಲೆಬಾಳುವ ವಸ್ತುಗಳು, ಹಣವನ್ನು ಭದ್ರವಾಗಿ ಇಟ್ಟುಕೊಳ್ಳಬೇಕು ಮತ್ತು ಬ್ಯಾಂಕ್ ಲಾಕರ್‌ಗಳಲ್ಲಿ ಇಡಬೇಕು. ಒಂದು ವೇಳೆ ಬೇರೆ ಊರಿಗೆ ಹೋದರೆ ಅಕ್ಕ ಪಕ್ಕದ ಮನೆಯವರಿಗೆ ಹಾಗೂ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.

ಅಪಚಿತ, ಸಂಶಯಾಸ್ಪದ ಜನರು ಕಂಡುಬಂದರೆ ಕೂಡಲೇ ಪೊಲೀಸ್ ಠಾಣೆಗೆ ಹಾಗೂ ಸಂಬಂಧಪಟ್ಟ ಬೀಟ್‌ ಪೊಲೀಸ್ ಸಿಬ್ಬಂದಿಗೆ ಹಾಗೂ 112 ನಂಬರ್‌ಗೆ ದೂರವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗಾಗಿ ಕುಲಗೋಡ ಪೊಲೀಸ್ ಠಾಣೆಯ ದೂ.08334 222233 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT