ಗುರುವಾರ , ಜೂನ್ 30, 2022
21 °C

‘ಮುಖ್ಯಮಂತ್ರ ಬದಲಾವಣೆ ಕಾರ್ಯಸೂಚಿ ಇಲ್ಲ’: ಗೋವಿಂದ ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಬಿಜೆಪಿಯ ರಾಜ್ಯ ನಾಯಕರಲ್ಲಾಗಲಿ ಅಥವಾ ಕೇಂದ್ರದ ಹೈಕಮಾಂಡ್‌ನವರಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ಕಾರ್ಯಸೂಚಿ ಇಲ್ಲ. ಆ ಬಗ್ಗೆ ಆಲೋಚನೆಯನ್ನೂ ಮಾಡಿಲ್ಲ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗುತ್ತದೆ ಎನ್ನುವುದು ಕೇವಲ ಊಹಾಪೋಹ. ಅದಕ್ಕೆ ರೆಕ್ಕೆಪುಕ್ಕ ಜೋಡಿಸುವ ಕೆಲಸವನ್ನು ಮಾಧ್ಯಮವು ಮಾಡುತ್ತಿದೆ. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರೈಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಪರ್ಯಾಯ ನಾಯಕತ್ವದ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು