ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರೈಸಲಿದ್ದಾರೆ ಎಂದು ಸಕ್ಕರೆ ಸಚಿವ ಅರೆಬೈಲ್ ಶಿವರಾಮ್ ಹೆಬ್ಬಾರ ಹೇಳಿದರು.

ಇಲ್ಲಿನ ಗಣೇಶಪುರದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಬದಲಾವಣೆ ಸತ್ಯಕ್ಕೆ ದೂರವಾದುದು. ಅದನ್ನು ಪಕ್ಷದ ವರಿಷ್ಠರೇ ಸ್ಪಷ್ಟಪಡಿಸಿದ್ದಾರೆ. ಹೀಗಿರುವಾಗ ಆ ವಿಷಯದಲ್ಲಿ ಪದೇ ಪದೇ ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸ್ವಪ್ನ ಬಿದ್ದಿರಬಹುದು. ಅವರನ್ನೇ ವಿಚಾರಿಸಿ' ಎಂದರು.

ಸಂಪುಟ ವಿಸ್ತರಣೆ ನಿರ್ಣಯ ಮುಖ್ಯಮಂತ್ರಿಗೆ ಬಿಟ್ಟಿದ್ದು. ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕೆ ಹೆಸರಾದವರು. ವರಿಷ್ಠರ ನಿರ್ದೇಶನದಂತೆ ಕ್ರಮ ಕೈಗೊಳ್ಳುತ್ತಾರೆ ಎಂದರು.

'ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಮಗಿಂತಲೂ ಮಾಧ್ಯಮದವರಿಗೇ ಹೆಚ್ಚು ಆಸಕ್ತಿ ಇದ್ದಂತಿದೆಯಲ್ಲಾ' ಎಂದರು.

'ಸಚಿವರಾಗಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಸಾಮಾನ್ಯ. ವಿಸ್ತರಣೆ ವೇಳೆ ಬೇಡಿಕೆಗಳೂ ಕೇಳಿಬರುತ್ತವೆ. ಅದೆಲ್ಲವನ್ನೂ ನಿಭಾಯಿಸುವ ಅನುಭವ ಮುಖ್ಯಮಂತ್ರಿಗಿದೆ. ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ. ಯಾವುದೇ ಕೆಲಸ ಕೊಟ್ಟರೂ ಪ್ರಾಮಾಣಿಕವಾಗಿ ಮಾಡೋದಷ್ಟೆ ನನ್ನ ಜವಾಬ್ದಾರಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.