ಶುಕ್ರವಾರ, ಜುಲೈ 30, 2021
20 °C

ಗಾಯಾಳು ಕೈಗೇ ಸಲಾಯಿನ್‌ ಕೊಟ್ಟರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ನೀಡಿದ ನಂತರ ಇಲ್ಲಿನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಅವರ ಕೈಯಲ್ಲೇ ಸಲಾಯಿನ್ ಬಾಟಲಿ ಹಿಡಿಸಿ ಕಳುಹಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವ್ಯಕ್ತಿಯನ್ನು ಆಂಬ್ಯುಲೆನ್ಸ್‌ಗೆ ಹತ್ತಿಸುವ ವಿಡಿಯೊ ಅದರಲ್ಲಿದೆ. ಈ ಘಟನೆ ಯಾವಾಗ ನಡೆದಿದೆ ಎನ್ನುವ ಖಚಿತ ಮಾಹಿತಿ ಇಲ್ಲ. ಅಲ್ಲಿದ್ದವರೊಬ್ಬರು ವಿಡಿಯೊ ಮಾಡಿ ವಾಟ್ಸ್‌ಆಪ್‌ನಲ್ಲಿ ಹಂಚಿಕೊಂಡಿದ್ದಾರೆ.

ಚಿಕಿತ್ಸೆ ಪಡೆಯುತ್ತಿದ್ದ ಬಾಲಕನೊಬ್ಬನನ್ನು ಸ್ಟ್ರೆಚ್ಚರ್‌ ಸಿಗದೇ ಪೋಷಕರು ಕಂಕುಳಲ್ಲಿ ಎತ್ತಿಕೊಂಡು ಹೋಗಿ ಮತ್ತೊಂದ ವಾರ್ಡ್‌ಗೆ ಸಾಗಿಸಿದ ವಿಡಿಯೊ ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು.

ಪ್ರತಿಕ್ರಿಯೆಗೆ ಬಿಮ್ಸ್‌ ನಿರ್ದೇಶಕ ಲಭ್ಯವಾಗಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.