ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಬಾಗ | ಸರಗಳ್ಳರ ಬಂಧನ: ಚಿನ್ನಾಭರಣ ವಶ

Published 7 ಜೂನ್ 2024, 15:40 IST
Last Updated 7 ಜೂನ್ 2024, 15:40 IST
ಅಕ್ಷರ ಗಾತ್ರ

ರಾಯಬಾಗ: ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಅಪರಾಧ ಪತ್ತೆ ವಿಭಾಗದ ಪೊಲೀಸರು ಬಂಧಿಸಿ, ₹2.25 ಲಕ್ಷ ಮೌಲ್ಯದ 3.75 ಗ್ರಾಂ ತೂಕದ ಚಿನ್ನಾಭರಣ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ಭೀಮ ನಗರ ನಿವಾಸಿಗಳಾದ ಸದ್ದಾಂ ಮೆಹಬೂಬ್ ಅವಟಿ (24), ಮಹಮ್ಮದ್ ಅಲಿ ಸಿರಾಜ ಡಾಂಗೆ (24) ಬಂಧಿತರು. ಮೇ28ರಂದು ಚಿಂಚಲಿ ರಸ್ತೆಯ ನಿವಾಸಿ ಸುನೀತಾ ಅಪ್ಪಾಸಾಬ ಪೂಜೇರಿ ಅವರು ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು, ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ರಾಯಬಾಗ ಪೊಲೀಸರು ತನಿಖೆ ಕೈಗೊಂಡಿದ್ದರು. ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ಪರಿಶೀಲಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್.ಪಿ.ಭೀಮಾಶಂಕರ ಗುಳೇದ, ಹೆಚ್ಚುವರಿ ಎಸ್ಪಿ ಶ್ರುತಿ ಎನ್. ಅವರ ಮಾರ್ಗದರ್ಶನದಲ್ಲಿ ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಚಿಕ್ಕೋಡಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ ನೇತೃತ್ವದಲ್ಲಿ ರಾಯಬಾಗ ಪೊಲೀಸರು  ಕಾರ್ಯಾಚರಣೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT