ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತೂರು ಅಭಿವೃದ್ಧಿ  ಪ್ರಾಧಿಕಾರಕ್ಕೆ ₹ 50 ಕೋಟಿ ಅನುದಾನ: ಸಿ.ಎಂ ಬೊಮ್ಮಾಯಿ

Last Updated 23 ಅಕ್ಟೋಬರ್ 2021, 8:38 IST
ಅಕ್ಷರ ಗಾತ್ರ

ಹುಬ್ಬಳ್ಳಿ : ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ ₹50 ಕೋಟಿ ವೆಚ್ಚ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗುವುದು‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅವರು, 2011 ರಲ್ಲಿ ₹8 ಕೋಟಿಬಿಡುಗಡೆ ಮಾಡಿ ಯೋಜನೆ ಆರಂಭಿಸಲಾಯಿತು ಎಂದರು.

ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ ಸ್ಥಾಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪಾತ್ರವನ್ನು ಸ್ಮರಿಸಿದರು.

ಕಿತ್ತೂರು ರಾಣಿ ಚನ್ನಮ್ಮ ನಾಡು ಕಂಡ ದಿಟ್ಟ ಧೀಮಂತ, ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು. ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಕರ್ನಾಟಕದ ಹೆಮ್ಮೆಯ ಮಹಿಳೆ‌ ಎಂದು ಹೇಳಿದರು.

ಕಿತ್ತೂರು ರಾಣಿ ಚನ್ನಮ್ಮ ಬೆಳಗಾವಿಗೆ ಮಾತ್ರ ಸೀಮಿತವಾಗಿರದೆ ಇಡೀ ರಾಜ್ಯಕ್ಕೆ ಸೇರಿದವರಾಗಿದ್ದಾರೆ‌‌ ಎಂದರು

ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ನವರ ಕೊಡುಗೆಯನ್ನು ಸ್ಮರಿಸಿ , ಅವರ ಆಶೋತ್ತರಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ‌ ಎಂದು ಹೇಳಿದರು

ಸಚಿವರಾದ ಮುರುಗೇಶ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ ಶಾಸಕ ರಾಜೂಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT