ಗುರುವಾರ , ಅಕ್ಟೋಬರ್ 6, 2022
23 °C

ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿ.ಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು' ಎಂದರು.

'ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ  ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು.

‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಸೆ.11ಕ್ಕೆ ಮುಂದೂಡಲಾಗಿದೆ’ ಎಂದರು.

ನಂತರ ಅವರು ಉಮೇಶ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿರುವ ಬೆಲ್ಲದ ಬಾಗೇವಾಡಿಗೆ ತೆರಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು