ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಜತೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪ ಸಾಬೀತಾಗಿದ್ದರಿಂದ ಬೆಳಗಾವಿಯ ಮೂವರು ಅಪರಾಧಿಗಳಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಇಲ್ಲಿನ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024ರ ಡಿಸೆಂಬರ್ 2ರಂದು ಘಟನೆ ನಡೆದಿದೆ. ಭಾರತ ನಗರದ ನಿವಾಸಿಗಳಾದ ಸಚಿನ ರಾಮಸಿಂಗ ಸಹಾನೆ (22), ಬಿಬಿಸರ ಪ್ರಸಾದ ಸಹಾನೆ (26), ಶುಭಂ ಶ್ರವಣ ಯಾದವ (23) ಶಿಕ್ಷೆಗೆ ಗುರಿಯಾದವರು.

ಸಂತ್ರಸ್ತ ಬಾಲಕಿಯನ್ನು ಹಿಂಬಾಲಿಸಿ ಅವಾಚ್ಯ ಶಬ್ದಗಳಲ್ಲಿ ಕಾಮೆಂಟ್ ಮಾಡುತ್ತ ಅನುಚಿತವಾಗಿ ವರ್ತಿಸಿ, ಕಿರುಕುಳ ನೀಡಿದ ಆರೋಪದಡಿ ಬಾಲಕಿಯ ಪೋಷಕರು ಎಪಿಎಂಸಿ ಠಾಣೆಗೆ ದೂರು ನೀಡಿದ್ದರು.

ಅಂದಿನ ಠಾಣಾಧಿಕಾರಿ ಎಸ್.ಎಸ್. ಮುತ್ತತ್ತಿಯವರು ಪ್ರಕರಣ ದಾಖಲಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಪ್ರಕರಣವನ್ನು ವಿಚಾರಣೆ ಮಾಡಿ, ಒಟ್ಟು 5 ಸಾಕ್ಷಿಗಳ ವಿಚಾರಣೆ ಮೇಲಿಂದ ಮೇಲೆ ಹಾಗೂ 20 ದಾಖಲೆಗಳ ಆಧಾರದ ಮೇಲೆ ಆರೋಪಿಗಳ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ತೀರ್ಪು ನೀಡಿದೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ಧನವನ್ನು ಪಡೆಯಲು ನ್ಯಾಯಾಲಯ ಆದೇಶ ನೀಡಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ಅವರು ವಾದ ಮಂಡಿಸಿದರು.

ಗಾಂಜಾ ಮಾರಾಟ: ಮೂವರ ಬಂಧನ

ರಾಮದುರ್ಗ: ತಾಲ್ಲೂಕಿನ ಹುಲಕುಂದ ಗ್ರಾಮದ ಉಳೇಶ್ವರ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟದ ಮಾಹಿತಿ ಆಧರಿಸಿ ಕಟಕೋಳ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ ಅವರಿಂದ ಗಾಂಜಾ ಮತ್ತು ಗಾಂಜಾ ಮಾರಾಟಕ್ಕೆ ಬಳಕೆ ಮಾಡಿದ್ದ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಕಟಕೋಳ ಪಿಎಸ್ಐ ಬಸವರಾಜ ಕೊಣ್ಣೂರೆ ಮತ್ತು ಸಿಬ್ಬಂದಿ ದಾಳಿ ಮಾಡಿ ಹುಲಕುಂದ ಗ್ರಾಮದ ಶಿವಪುತ್ರಪ್ಪ ಹನಮಪ್ಪ ಹಡಪದ (ಗೆಜ್ಜಿಸ್ವಾಮಿ), ಅಣ್ಣಿಗೇರಿ ತಾಲ್ಲೂಕಿನ ತುಪ್ಪದ ಕುರಹಟ್ಟಿ ಗ್ರಾಮದ ಪುಂಡಲೀಕಪ್ಪ ಹಣಮಂತಪ್ಪ ಶೆಟ್ಟೆಪ್ಪನವರ ಮತ್ತು ಗೋಕಾಕ ತಾಲ್ಲೂಕಿನ ಯಲ್ಲಪ್ಪ ಬಾಳಪ್ಪ ಶಿಂತ್ರಿ ಎಂಬುವರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

ಕಟಕೋಳ ಠಾಣಾ ಸಿಬ್ಬಂದಿ ಶಿವಾನಂದ ಭಾಂಗಿ ನೀಡಿದ ದೂರಿನನ್ವರ ಕಟಕೋಳ ಪೊಲೀಸರು ದಾಳಿ ಮಾಡಿ ದಾಳಿ ಸಮಯಕ್ಕೆ ₹25,000 ಮೌಲ್ಯದ 263 ಗ್ರಾಂ ಗಾಂಜಾ, ಗಾಂಜಾ ಮಾರಾಟದಿಂದ ಸಂಗ್ರಹಿಸಿದ್ದ ₹3,400 ಮತ್ತು ಕೃತ್ಯಕ್ಕೆ ಬಳಸಿದ್ದ ಮೋಟಾರ್ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಕಟಕೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.