ಶನಿವಾರ, ನವೆಂಬರ್ 28, 2020
22 °C

‘ಟಿಕೆಟ್: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಯಾರೂ ಬಯಸಿರಲಿಲ್ಲ. ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ಅನಿವಾರ್ಯವಾಗಿ ಚುನಾವಣೆ ಎದುರಿಸಬೇಕಾಗಿದೆ. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಿರುತ್ತೇನೆ’ ಎಂದು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅಂಗಡಿ ಅವರಿಗೆ ಸಾಯುವಂತಹ ವಯಸ್ಸಾಗಿರಲಿಲ್ಲ. ನನ್ನ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು  ಅವರು ಕೊಟ್ಟಿದ್ದರು. ಅಭಿವೃದ್ಧಿ ವಿಚಾರದಲ್ಲಿ ಪಕ್ಷಪಾತ ಮಾಡಿರಲಿಲ್ಲ. ಹೀಗಾಗಿ ಸಾಧಕ-ಬಾಧಕಗಳನ್ನು ವಿಚಾರ ಮಾಡಿ ಪಕ್ಷ ಅಂತಿಮ ತೀರ್ಮಾನ ಮಾಡುತ್ತದೆ’ ಎಂದು ಹೇಳಿದರು.

‘ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ ಪ್ರಬಲ ಅಭ್ಯರ್ಥಿ ಅಲ್ಲ’ ಎಂಬ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರ ಹೇಳಿಕೆಗೆ ಉತ್ತರಿಸುವ ಸಂದರ್ಭ ಇದಲ್ಲ. 2023ಕ್ಕೆ ಉತ್ತರ ನೀಡುತ್ತೇನೆ’ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು