ಬೆಳಗಾವಿ: ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮ ದಿನದ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ‘ಶೌರ್ಯ’ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ.

‘ಆರಂಭಿಕವಾಗಿ ₹ 1 ಲಕ್ಷ ಚೆಕ್ ಅನ್ನು ಅರಣ್ಯಾಧಿಕಾರಿಗೆ ಹಸ್ತಾಂತರಿಸಿದ್ದೇನೆ. ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿದ್ದೇನೆ. ಲಾಕ್‌ಡೌನ್ ಕಾರಣದಿಂದಾಗಿ ಪ್ರಾಣಿಸಂಗ್ರಹಾಲಯಗಳಿಗೆ ಸಂದರ್ಶಕರ ಸಂಖ್ಯೆ ಕಡಿಮೆಯಾಗಿದೆ. ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಲಿ ದತ್ತು ಸ್ವೀಕರಿಸಿದ್ದೇನೆ’ ಎಂದು ಹೇಳಿದರು.

‘ಸಾರ್ವಜನಿಕರು ಪ್ರಾಣಿಗಳ ದತ್ತು ಪಡೆಯಬೇಕು’ ಎಂದು ಸಲಹೆ ನೀಡಿದರು.

ಮುಖಂಡ ಚನ್ನರಾಜ ಹಟ್ಟಿಹೊಳಿ, ಡಿಎಫ್‌ಒ ಅಮರನಾಥ ರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.