ಆನೆ ದಂತದ ಕಡಗ, ಹುಲಿ ಉಗುರು ಮಾರಾಟ: ವ್ಯಕ್ತಿ ಬಂಧನ

ಬೆಳಗಾವಿ: ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದದವರು ಬಂಧಿಸಿದ್ದಾರೆ.
ನಗರದ ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ. ಅವರಿಂದ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಲ್ಲಿ ದೂರು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಂದಿನ ತನಿಖೆಯನ್ನು ಬೆಳಗಾವಿ ಎಸಿಎಫ್‌ಗೆ ವಹಿಸಲಾಗಿದೆ ಎಂದು ದಳದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.