ಬೆಳಗಾವಿ: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೇ 6ರಿಂದ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮೇ 6ರಂದು ಸಂಜೆ 6ಕ್ಕೆ ಬಂದು ತಂಗುವರು. 7ರಂದು ಬೆಳಿಗ್ಗೆ 11ಕ್ಕೆ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ಆಯೋಜಿಸಿರುವ ತೋಂಟದಾರ್ಯ ಮಠದ ಶಿವಮೂರ್ತಿ ದೇವರ ಪಟ್ಟಾಧಿಕಾರ ಸಮಾರಂಭ ಮತ್ತು ಮಧ್ಯಾಹ್ನ 2ಕ್ಕೆ ಬೈಲಹೊಂಗಲ ತಾಲ್ಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡುವರು. 8ರಂದು ಬೆಳಿಗ್ಗೆ 11ಕ್ಕೆ ರಾಮದುರ್ಗ ತಾಲ್ಲೂಕು ಹುಲಕುಂದ ಮತ್ತು ಮಧ್ಯಾಹ್ನ 1.30ಕ್ಕೆ ಅವರಾದಿಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5ಕ್ಕೆ ಸಾಂಬ್ರಾ ವಿಮಾನನಿಲ್ದಾಣದಿಂದ ಬೆಂಗಳೂರಿಗೆ ತೆರಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇ 7ರಂದು ಬೆಳಿಗ್ಗೆ 11ಕ್ಕೆ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ತೋಂಟದಾರ್ಯ ಮಠದ ಶಿವಮೂರ್ತಿ ದೇವರ ಪಟ್ಟಾಧಿಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ಕ್ಕೆ ನಗರದ ಪಕ್ಷದ ಕಚೇರಿಯಲ್ಲಿ ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಮುಖಂಡರ ಸಭೆ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಪ್ರಕಟಣೆಯುಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.