‘ಪ್ರವಾಸದಲ್ಲಿ ಇದ್ದುದರಿಂದ ಔತಣಕೂಟಕ್ಕೆ ಹೋಗಿರಲಿಲ್ಲ’

7

‘ಪ್ರವಾಸದಲ್ಲಿ ಇದ್ದುದರಿಂದ ಔತಣಕೂಟಕ್ಕೆ ಹೋಗಿರಲಿಲ್ಲ’

Published:
Updated:

ಬೆಳಗಾವಿ: ಕ್ಷೇತ್ರದ ಪ್ರವಾಸದಲ್ಲಿ ಇದ್ದುದರಿಂದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಕರೆದಿದ್ದ ಔತಣಕೂಟದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಇದನ್ನು ಬಿಟ್ಟರೆ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿತ್ತು. ಅದಕ್ಕಾಗಿ ಬೆಂಗಳೂರಿನಿಂದ ಇಲ್ಲಿಗೆ ಬಂದುಬಿಟ್ಟಿದ್ದೆ. ಹೀಗಾಗಿ ಔತಣಕೂಟದಲ್ಲಿ ಭಾಗವಹಿಸಿರಲಿಲ್ಲ’ ಎಂದರು.

‘ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ನನಗೇನೂ ತಿಳಿದಿಲ್ಲ’ ಎಂದು ಹೇಳಿದ ಅವರು, ‘ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ ಎಂದು ಸಹೋದರ, ಶಾಸಕ ರಮೇಶ ಜಾರಕಿಹೊಳಿ ನೀಡಿದ್ದ ಹೇಳಿಕೆಗಳನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ’ ಎಂದರು. ಬಜೆಟ್‌ ಮಂಡಿಸಿದ ನಂತರ ನಿಗಮ– ಮಂಡಳಿಗಳಿಗೆ ನೇಮಕ ಪ್ರಕ್ರಿಯೆ ಆರಂಭಗೊಳ್ಳಲಿದೆ. ಶಾಸಕರಿಗೆ ಮೊದಲ ಆದ್ಯತೆ ನೀಡಲಾಗುವುದು. ಆ ನಂತರ ಕಾರ್ಯಕರ್ತರಿಗೆ ನೀಡಲಾಗುವುದು. ನಮ್ಮ ಕಡೆಯ ಆಕಾಂಕ್ಷಿಗಳ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ನೀಡಲಾಗಿದೆ ಎಂದು ಹೇಳಿದರು.

ಸದ್ಯಕ್ಕೆ ನಡೆಯುತ್ತಿರುವ ಅಧಿವೇಶನ ಮುಗಿದ ನಂತರ ಸಿದ್ದರಾಮಯ್ಯ ಅವರ ಜೊತೆ ಮುಂದಿನ ನಡೆಯ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 

 

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !