ಬುಧವಾರ, ಸೆಪ್ಟೆಂಬರ್ 28, 2022
26 °C

275 ಟ್ರ್ಯಾಕ್ಟರ್‌ಗಳ ರ್‍ಯಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಅರಭಾವಿ ಮಂಡಲದಿಂದ ಭಾನುವಾರ ಆಯೋಜಿಸಿದ್ದ 275 ಟ್ರ್ಯಾಕ್ಟರ್‌ ರ್‍ಯಾಲಿ ಗಮನ ಸೆಳೆಯಿತು.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜಿಸಿದ ಈ ರ್‍ಯಾಲಿಗೆ ಇಲ್ಲಿಯ ಎನ್‍ಎಸ್‍ಎಫ್‍ ಆವರಣದಲ್ಲಿ ಮುಖಂಡ ಸರ್ವೋತ್ತಮ ಜಾರಕಿಹೊಳಿ ಚಾಲನೆ ನೀಡಿದರು. ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ, ಗಣೇಶವಾಡಿ, ದಂಡಾಪೂರ ಕ್ರಾಸ್, ರಾಜಾಪೂರ, ತುಕ್ಕಾನಟ್ಟಿ ಮಾರ್ಗವಾಗಿ ನಾಗನೂರ ಪಟ್ಟಣದ ಮಹಾಲಿಂಗೇಶ್ವರ ಮಠದಲ್ಲಿ ಸಮಾರೋಪಗೊಂಡಿತು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಶ ಪಾಟೀಲ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಶಿ ಮಾಳೆದವರ, ರೈತಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಪದಾಧಿಕಾರಿಗಳು ಹಾಗೂ ರೈತರು ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು