ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಕ್ಕೇರಿ: ಟ್ರ್ಯಾಕ್ಟರ್ ಕಳ್ಳರ ಬಂಧನ

Published 6 ಜುಲೈ 2023, 14:01 IST
Last Updated 6 ಜುಲೈ 2023, 14:01 IST
ಅಕ್ಷರ ಗಾತ್ರ

ಹುಕ್ಕೇರಿ: ತಾಲ್ಲೂಕಿನ ಗೌಡವಾಡ ಗ್ರಾಮದಲ್ಲಿ ಕಳ್ಳತನವಾಗಿದ್ದ ಟ್ರ್ಯಾಕ್ಟರ್ ಪತ್ತೆ‌ ಮಾಡುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ₹2.5 ಲಕ್ಷ ಮೌಲ್ಯದ ಮಹೀಂದ್ರಾ ಕಂಪನಿಯ ಟ್ರ್ಯಾಕ್ಟರ್ ಎಂಜಿನ್‌ ವಶಪಡಿಸಿಕೊಂಡಿದ್ದಾರೆ.

ಚಿಕ್ಕೋಡಿ ತಾಲ್ಲೂಕಿನ ಜಾಗನೂರ ಗ್ರಾಮದ ಶಿವಾನಂದ ಕರಿಕಟ್ಟಿ(22) ಮತ್ತು ಗೋಕಾಕ ತಾಲ್ಲೂಕಿನ ಫಾಮಲ್ ದಿನ್ನಿ ಗ್ರಾಮದ ಶಿವಾನಂದ ಹಣಬರಟ್ಟಿ (20) ಆರೋಪಿಗಳು.

ಇದೇ ವರ್ಷ ಏಪ್ರೀಲ್ 28ರಂದು ರಾತ್ರಿ ತಾಲ್ಲೂಕಿನ ಗೌಡವಾಡ ಗ್ರಾಮದಲ್ಲಿ ಮಹೀಂದ್ರಾ ಕಂಪನಿಯ ಟ್ರ್ಯಾಕ್ಟರ್ ಕಳ್ಳತನವಾದ ಬಗ್ಗೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್‌ಪಿ ಡಾ.ಸಂಜೀವ ಪಾಟೀಲ, ಹೆಚ್ಚುವರಿ ಎಸ್.ಪಿ ಎಂ.ವೇಣುಗೋಪಾಲ್, ಗೋಕಾಕ ಡಿವೈಎಸ್‌ಪಿ ದೂದಪೀರ್ ಮುಲ್ಲಾ ಅವರ ಮಾರ್ಗದರ್ಶನದಲ್ಲಿ ಹುಕ್ಕೇರಿ ಪಿಐ ಎಂ.ಎಂ.ತಹಶೀಲ್ದಾರ್ ಅವರು ಜುಲೈ 6ರಂದು ಪ್ರಕರಣ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT