ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ

Last Updated 1 ಜುಲೈ 2022, 11:38 IST
ಅಕ್ಷರ ಗಾತ್ರ

ಅಥಣಿ: ತಾಲ್ಲೂಕಿನ ಚಮಕೇರಿಯಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಬುಧವಾರ ಟ್ರ್ಯಾಕ್ಟರ್‌ ಹಗ್ಗಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿತ್ತು. ಇದರ ವಿಡಿಯೊಗಳು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಆಯೋಜಕರ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಥಣಿ –ಚಮಕೇರಿ ರಸ್ತೆಯಲ್ಲಿ ಬೀರಲಿಂಗೇಶ್ವರ ಜಾತ್ರೆ ಅಂಗವಾಗಿ ಬುಧವಾರ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿತ್ತು. ಅ‍‍ಪಾಯವನ್ನೂ ಲೆಕ್ಕಿಸದೆ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೊಲೀಸರು ಗ್ರಾಮಕ್ಕೆ ದೌಡಾಯಿಸಿದ್ದಾರೆ.

ಅಥಣಿ ಸಿಪಿಐ ಶಂಕರಗೌಡ ಬಸನಗೌಡರ, ಪಿಎಸ್ಐ ಪಿ.ಪವಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಾರ್ವಜನಿಕ ವಲಯದಲ್ಲಿ ಅಪಾಯಕಾರಿಯಾಗಿ ಟ್ರ್ಯಾಕ್ಟರ್‌ ಸ್ಪರ್ಧೆ ಆಯೋಜಿಸಿದ ಆರೋಪದಡಿ ಆಯೋಜಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT