ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಹೊಸ ಕಾನೂನು; ಪೊಲೀಸರಿಗೆ ತರಬೇತಿ

Published 26 ಮೇ 2024, 16:29 IST
Last Updated 26 ಮೇ 2024, 16:29 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೊಸ ಕ್ರಿಮಿನಲ್‌ ಕಾನೂನುಗಳ ಬಗ್ಗೆ ತರಬೇತಿ ನೀಡಲಾಯಿತು.

ನಗರ ಪೊಲೀಸ್‌ ಉಪ ಆಯುಕ್ತರ ನೇತೃತ್ವದಲ್ಲಿ ನಡೆದ ತರಬೇತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಸ ಸಂಹಿತೆ, ಭಾರತೀಯ ಸಾಕ್ಷಿ ಅಧಿನಿಯಮ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಿದರು.

‘ಜುಲೈ 1ರಿಂದ ಹೊಸ ಕಾನೂನುಗಳು ಜಾರಿಗೆ ಬರಲಿವೆ. ಈ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವುದಕ್ಕಾಗಿ ತರಬೇತಿ ನೀಡಲಾಗುತ್ತಿದೆ. ಈವರೆಗೆ 800 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಈಗಾಗಲೇ ಎರಡು ಹಂತದ ತರಬೇತಿ ಮುಗಿದಿದೆ. ಜೂನ್‌ 10ರವರೆಗೆ ತರಬೇತಿ ನಡೆಯಲಿವೆ’ ಎಂದು ನಗರ ಪೊಲೀಸ್‌ ಉಪ ಆಯುಕ್ತೆ ಪಿ.ವಿ.ಸ್ನೇಹಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT