ಶನಿವಾರ, ಜನವರಿ 22, 2022
16 °C

ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಡಿ.10ರಂದು ನಡೆಯಲಿರುವ ವಿಧಾನಪರಿಷತ್ತಿನ ಚುನಾವಣೆಗಾಗಿ ಪ್ರತಿ ಮತಗಟ್ಟೆಗೆ ನಿಯೋಜನೆಗೊಂಡಿರುವ ಮೈಕ್ರೋ ಅಬ್ಸರ್ವರ್‌ಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಚುನಾವಣಾ  ವೀಕ್ಷಕಿ ಏಕರೂಪ್ ಕೌರ್ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಮೈಕ್ರೋ ಅಬ್ಸರ್ವರ್‌ಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪ್ರತಿ ಮತಗಟ್ಟೆಗಳಲ್ಲೂ ವಿಡಿಯೊ ಮಾಡಬೇಕು. ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ತುರ್ತು ಸಂದರ್ಭ ಎದುರಾದರೆ ತಕ್ಷಣವೇ ತಮ್ಮನ್ನು ಅಥವಾ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಚುನಾವಣಾ ಆಯೋಗದ ಚೆಕ್ ಲಿಸ್ಟ್ ಪ್ರಕಾರ ಮತಗಟ್ಟೆಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಮುಂಚಿತವಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಎಲ್ಲರಿಗೂ ಈಗಾಗಲೇ ಅಗತ್ಯ ತರಬೇತಿ ನೀಡಿರುವುದರಿಂದ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶಕುಮಾರ್, ‘ಚುನಾವಣೆಯು ಅತ್ಯಂತ ಪ್ರಮುಖ ಜವಾಬ್ದಾರಿ ಆಗಿರುವುದರಿಂದ ಯಾವುದೇ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು. ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಸೂಚಿಸಿದರು.

ಚುನಾವಣಾ ತರಬೇತಿ‌ ನೋಡಲ್ ಅಧಿಕಾರಿ ಪ್ರೀತಂ ನಸಲಾಪುರೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು