ಸೋಮವಾರ, ಡಿಸೆಂಬರ್ 6, 2021
25 °C

ಕಾನೂನುಗಳನ್ನು ಅರಿಯಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಯಾವುದೇ ಕಾನೂನು ಅಥವಾ ನಿಯಮಗಳು ಉಲ್ಲಂಘನೆಯಾದಲ್ಲಿ, ಸರಿಯಾದ ಕಾಯ್ದೆಯಲ್ಲಿ ಅಧಿಕಾರಿಗಳು ಪ್ರಕರಣ ದಾಖಲಿಸಬೇಕು. ಆ ಸಂದರ್ಭಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಸಲಹೆ ನೀಡಲಾಗುವುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸು ತಿಳಿಸಿದರು.

ನಗರದಲ್ಲಿ ಕಾರ್ಮಿಕ ಇಲಾಖೆಯ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳು ಹಾಗೂ ಇನ್‌ಸ್ಪೆಕ್ಟರ್‌ಗಳಿಗೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಇಲಾಖೆಯ ಅಧಿಕಾರಿಗಳು ಕರ್ತವ್ಯದ ಜೊತೆಗೆ ವಿವಿಧ ತರಬೇತಿಗಳನ್ನು ಪಡೆಯಬೇಕು. ಕಾನೂನು– ಕಾಯ್ದೆಗಳ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ಸವಾಲುಗಳು ಎದುರಾದರೂ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಲಿವೆ’ ಎಂದು ಹೇಳಿದರು.

‘ಅಧಿಕಾರಿಗಳು ದಾಳಿ ನಡೆಸಿದಾಗ ಹೆಚ್ಚಿನ ಸಾಕ್ಷಿ ಸಂಗ್ರಹಿಸಬೇಕು. ಪ್ರಸ್ತುತ ತಂತ್ರಜ್ಞಾನ ಬಳಕೆಯ ಮೂಲಕ ವಿಡಿಯೊ ಹಾಗೂ ಫೋಟೊ ಸಾಕ್ಷಿ ಸಂಗ್ರಹಿಸಿ ಪ್ರಕರಣ ದಾಖಲಿಸಬೇಕು’ ಎಂದು ಸಲಹೆ ನೀಡಿದರು.

‌ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಅಧಿಕಾರಿಗಳಾದ ಕೆ.ಜಿ. ಜಾನ್ಸನ್, ಸಂಗಮೇಶ ಹಿರೇಮಠ, ವಕೀಲರಾದ ಅಶೋಕ ಹಲಗಲಿ, ಶ್ರೀಕಾಂತ ಕೆ.ಎಸ್, ಕಾರ್ಮಿಕ ಅಧಿಕಾರಿ ತರನ್ನುಂ ಬೆಂಗಾಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು