ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಯಂ ರಕ್ಷಣಾ ತರಬೇತಿ ಅಗತ್ಯ: ಹಂಜಾ ಹುಸೇನ್

Last Updated 20 ಮಾರ್ಚ್ 2021, 13:47 IST
ಅಕ್ಷರ ಗಾತ್ರ

ಬೆಳಗಾವಿ: ‘ಇಂದಿನ ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರ ಸುರಕ್ಷತೆ ದೊಡ್ಡ ಸವಾಲಾಗಿದೆ. ಹೀಗಾಗಿ ಸ್ವಯಂ ರಕ್ಷಣಾ ತರಬೇತಿ ಅಗತ್ಯವಾಗಿದೆ’ ಎಂದು ಕೆ.ಎಸ್.ಆರ್.ಪಿ. 2ನೇ ಪಡೆ ಕಮಾಂಡೆಂಟ್ ಹಂಜಾ ಹುಸೇನ್ ತಿಳಿಸಿದರು.

ಇಲ್ಲಿನ ಡೆವೈನ್ ಮರ್ಸಿ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಶನಿವಾರ ಹಮ್ಮಿಕೊಂಡಿದ್ದ ಶಸ್ತ್ರರಹಿತ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ತರಬೇತಿಗೆ 10 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಬೋಧಕರಾಗಿ 32 ಮಹಿಳಾ ಆರ್‌ಎಚ್‌ಸಿ/ಆರ್‌ಪಿಸಿಗಳನ್ನು ನಿಯೋಜಿಸಲಾಗಿದೆ’ ಎಂದರು.

ಡೆವೈನ್ ಮರ್ಸಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಸಿಸ್ಟರ್ ಸುನೀತಾ ಆರ್., ಪಿಯು ಕಾಲೇಜಿನ ಪ್ರಾಂಶುಪಾಲ ಫಾ.ಅಲೆಕ್ಸ್ ಡಿಕ್ರೂಸ್, ಕೆ.ಎಸ್.ಆರ್.ಪಿ. 2ನೇ ಪಡೆ ಸಹಾಯಕ ಕಮಾಂಡೆಂಟ್ ಎನ್.ಪಿ. ಯಡಾಲ, ಆರ್‌ಎಸ್ಐ ಶ್ರೀದೇವಿ ಕಟಕದೊಂಡ, 170 ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT