ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ಕರ: ಪರ್ಯಾಯ ವ್ಯವಸ್ಥೆ ಚರ್ಚೆಗೆ ಏ.3ರಂದು ಸಭೆ

Last Updated 31 ಮಾರ್ಚ್ 2021, 14:17 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದಿಂದ ಏ. 7ರಿಂದ ಅನಿರ್ದಿಷ್ಟ ಅವಧಿಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚಿಸಲು ಏ.3ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.

ವಿವಿಧ ವರ್ಗದ ವಾಹನಗಳ ಪ್ರವರ್ತಕರ ಸಂಘಗಳ ಪ್ರತಿನಿಧಿಗಳು, ಪ್ರವರ್ತಕರ ಸಭೆಯನ್ನು ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಸಭೆ ಆಯೋಜಿಸಲಾಗಿದೆ. ಸಾರಿಗೆ ಸೌಲಭ್ಯ ನೀಡುವಲ್ಲಿ ಯಾವುದೇ ವೈಫಲ್ಯ ಆಗಬಾರದೆಂಬ ದೃಷ್ಟಿಯಿಂದ ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲಾಗುತ್ತಿದೆ. ಖಾಸಗಿ ಪ್ರಯಾಣಿಕರ ವಾಹನಗಳಾದ ಪ್ರವಾಸಿ ವಾಹನಗಳು, ಒಪ್ಪಂದ ವಾಹನಗಳು, ಖಾಸಗಿ ಸೇವಾ ವಾಹನಗಳು ಮತ್ತು ಶಾಲಾ ವಾಹನಗಳನ್ನು ಮುಷ್ಕರದ ಅವಧಿಯಲ್ಲಿ ಬಳಸಿಕೊಂಡು ಸಾರ್ವಜನಿಕರಿಗೆ ಸೂಕ್ತ ಸಾರಿಗೆ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಸಭೆ ಕರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

‘ಪ್ರಮುಖ ಮಾರ್ಗಗಳಲ್ಲಿ ಖಾಸಗಿ ಪ್ರಯಾಣಿಕ ವಾಹನಗಳನ್ನು ವ್ಯವಸ್ಥೆಯನ್ನು ಮಾಡಲು ಜಿಲ್ಲಾಡಳಿತವು ಕ್ರಮ ವಹಿಸುವ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT