ಶುಕ್ರವಾರ, ಆಗಸ್ಟ್ 19, 2022
25 °C

ಸಾರಿಗೆ ನೌಕರರ ಮುಷ್ಕರ: ತಲೆ ಮೇಲೆ ಚಪ್ಪಲಿ ಇಟ್ಟುಕೊಂಡು ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನವಾದ ಶನಿವಾರವೂ ಮುಂದುವರಿದಿದೆ.

ಕೆಲಸದಿಂದ ದೂರ ಉಳಿದು ಹೋರಾಟ ನಡೆಸುತ್ತಿರುವ ಅವರು, ತಲೆ ಮೇಲೆ ಚಪ್ಪಲಿಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಿಲ್ದಾಣದಲ್ಲೇ ಉಪಾಹಾರ ಸಿದ್ಧಪಡಿಸಲು ತಯಾರಿ ನಡೆಸಿದ್ದಾರೆ. ಮುಷ್ಕರದ ಬಗ್ಗೆ ಮಾಹಿತಿ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಬಸ್ ನಿಲ್ದಾಣದತ್ತ ಬರುತ್ತಿಲ್ಲ. ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಹಿಂಪಡೆಯುವುದಿಲ್ಲ ಎಂದು ನೌಕರರು ಪಟ್ಟು‌ ಹಿಡಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು