ಮಂಗಳವಾರ, ಅಕ್ಟೋಬರ್ 20, 2020
26 °C
ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹೇಳಿಕೆ

ಸತ್ಯ, ಅಹಿಂಸಾ ತತ್ವ ಗಾಂಧೀಜಿ ಕೊಡುಗೆ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಮಹಾತ್ಮ ಗಾಂಧೀಜಿ ಅವರು ನೀಡಿದ ಸತ್ಯ ಮತ್ತು ಅಹಿಂಸಾ ಮಾರ್ಗವು ವಿಶ್ವದಾದ್ಯಂತ ಎಲ್ಲ ಕಾಲಕ್ಕೂ ಪ್ರಸ್ತುತವಾಗಿದೆ. ಈ ತತ್ವವನ್ನು ನಾವು ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸಂಘದಿಂದ ಇಲ್ಲಿನ ಟಿಳಕವಾಡಿಯ ವೀರಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಅಹಿಂಸಾ ಹೋರಾಟಕ್ಕೆ ಸ್ಫೂರ್ತಿಯಾಗಿದ್ದ ಗಾಂಧೀಜಿ ಅವರ ಸಮಪಾಲು–ಸಮಬಾಳು ಎಂಬ ತತ್ವ ನಮ್ಮ ಸಂವಿಧಾನದ ಆಶಯವಾಗಿದೆ. ಆ ಪ್ರಕಾರವೇ ದೇಶ ನಡೆಯುತ್ತಿದೆ. ಅವರು ಕಂಡ ಸ್ವಚ್ಛ ಮತ್ತು ಆರೋಗ್ಯ ಭಾರತದ ಕನಸು ಸಾಕಾರಗೊಳಿಸುವ ಜವಾಬ್ದಾರಿ ಎಲ್ಲರದಾಗಿದೆ’ ಎಂದರು.

‘ಶಾಸ್ತ್ರೀಜಿ ಅತ್ಯಂತ ಸರಳಜೀವಿಯಾಗಿದ್ದರು. ರೈಲು ದುರಂತವೊಂದು ನಡೆದಾಗ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ  ಮಾದರಿಯಾಗಿದ್ದರು’ ಎಂದು ಸ್ಮರಿಸಿದರು.

ಸಂಗೀತ ಶಿಕ್ಷಕ ವಿನಾಯಕ ಮೋರೆ ಹಾಗೂ ತಂಡದವರು ಭಜನೆಗಳನ್ನು ಪ್ರಸ್ತುತಪಡಿಸಿದರು. ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್  ಸ್ವಾಗತಿಸಿದರು. ಸರ್ವಮಂಗಳಾ ಅರಳಿಮಟ್ಟಿ ನಿರೂಪಿಸಿದರು.

ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಪರಶುರಾಮ ನಂದಿಹಳ್ಳಿ, ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಪಾಲಿಕೆಯ ಉಪ ಆಯುಕ್ತೆ ಲಕ್ಷ್ಮಿ ನಿಪ್ಪಾಣಿಕರ, ಸಂಘದ ರಾಜೇಂದ್ರ ಕಲಘಟಗಿ, ಅರುಣ ಚಿಬತೆ, ಆಚಾರ್ಯ ಸುರೇಂದ್ರ ದೇಸಾಯಿ, ಶಿವಾಜಿರಾವ್ ಕದಂ, ಮಾರುತರಾವ್ ಲೋಹಾರ್, ವಿಜಯರಾವ್ ಶಿಂಗತೆ, ಡಾ.ಸವಿತಾ ಗುರವ, ನಮ್ರತಾ ಕುಲಕರ್ಣಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು