ಸೋಮವಾರ, ಆಗಸ್ಟ್ 10, 2020
21 °C

ಬೆಳಗಾವಿ: ಕೋವಿಡ್‌ನಿಂದ ಮತ್ತಿಬ್ಬರು ಸಾವು, ಮತ್ತೆ 27 ಮಂದಿಗೆ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಳಗಾವಿ: ಕೋವಿಡ್–19ನಿಂದ ಬಳಲುತ್ತಿದ್ದ ಇಬ್ಬರು ಸೋಮವಾರ ಮುಂಜಾನೆ ಮೃತರಾಗಿದ್ದಾರೆ. ಇದರೊಂದಿಗೆ ಈ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಗೋಕಾಕ ತಾಲ್ಲೂಕು ಕೌಜಲಗಿಯ 45 ವರ್ಷದ ವ್ಯಕ್ತಿ (ಭಾನುವಾರ ಅವರಿಗೆ ಸೋಂಕು ದೃಢಪಟ್ಟಿತ್ತು) ಹಾಗೂ ಅಥಣಿಯ 72 ವರ್ಷದ ವ್ಯಕ್ತಿ ಸಾವಿಗೀಡಾದವರು. ಇಬ್ಬರಿಗೂ ತೀವ್ರ ಉಸಿರಾಟದ ತೊಂದರೆ ಇತ್ತು. 9 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸೋಮವಾರ  ಒಂದೇ ದಿನ ಹೊಸದಾಗಿ 27 ಮಂದಿಗೆ ಸೋಂಕು ದೃಢಪಟ್ಟಿದೆ. ಇವರಲ್ಲಿ ಬಹಳಷ್ಟು ಮಂದಿ ಶೀತ ಜ್ವರ (ಐಎಲ್‌ಐ)ದಿಂದ ಬಳಲುತ್ತಿರುವವರಾಗಿದ್ದಾರೆ. ಎಲ್ಲರನ್ನೂ ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೌಜಲಗಿ ವರದಿ

ಕೌಜಲಗಿ ಸಮೀಪದ ಯಾದವಾಡ ಗ್ರಾಮದಲ್ಲಿ 33 ವರ್ಷದ ವ್ಯಕ್ತಿಗೆ ಕೋವಿಡ್–19 ದೃಢಪಟ್ಟಿದೆ. ಅವರು ಹೋಟೆಲ್‌ ನಡೆಸುತ್ತಿದ್ದರು. ಆನಾರೋಗ್ಯದಿಂದ ಬಾಗಲಕೋಟೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎಂದು ತಿಳಿದುಬಂದಿದೆ.

ಸೋಂಕಿತರ ಮನೆಯ ಸುತ್ತಮುತ್ತಲಿನ 50 ಮೀಟರ್ ಪ್ರದೇಶದಲ್ಲಿ ಸೀಲ್‌ಡೌನ್‌ ಮಾಡಲಾಗಿದೆ. ಅವರ ಕುಟುಂಬದ ಐವರನ್ನು ಕ್ವಾರೆಂಟೈನ್ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು